ಎನ್ ಸಿಸಿ ಶಿಬಿರ 
ದೇಶ

ಕೊಚ್ಚಿ: ವಿಷಾಹಾರ ಸೇವನೆಯಿಂದ 80 ವಿದ್ಯಾರ್ಥಿಗಳು ಅಸ್ವಸ್ಥ, NCC ಶಿಬಿರ ಬಂದ್!

ಶಿಬಿರದಲ್ಲಿ ಸುಮಾರು 600 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಪೈಕಿ 80 ವಿದ್ಯಾರ್ಥಿಗಳಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವುದಾಗಿ ಶಂಕಿಸಲಾಗಿದೆ.

ಕೊಚ್ಚಿ: ವಿಷಾಹಾರ ಸೇವನೆಯಿಂದ ಸುಮಾರು 80 ವಿದ್ಯಾರ್ಥಿಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೇರಳದ ವಿವಿಧ ಕಾಲೇಜುಗಳ ಸುಮಾರು 600 ಕೆಡೆಟ್‌ಗಳು ಪಾಲ್ಗೊಂಡಿದ್ದ ತೃಕ್ಕಾಕರ ಎನ್‌ಸಿಸಿ ಶಿಬಿರವನ್ನು ಮಂಗಳವಾರ ಮುಂಜಾನೆ ಸ್ಥಗಿತಗೊಳಿಸಲಾಗಿದೆ.

ತೃಕ್ಕಾಕರದ ಕೆಎಂಎಂ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಎನ್‌ಸಿಸಿ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಸೋಮವಾರ ಸಂಜೆ ಅತಿಸಾರದ ಲಕ್ಷಣಗಳು ಕಾಣಿಸಿಕೊಂಡಿದೆ. ತಕ್ಷಣವೇ ಅವ ಕಲಮಸ್ಸೆರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಇತರ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ಶಿಬಿರದಲ್ಲಿ ಸುಮಾರು 600 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಪೈಕಿ 80 ವಿದ್ಯಾರ್ಥಿಗಳಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವುದಾಗಿ ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾಲೇಜಿನಲ್ಲಿ ನೀಡುತ್ತಿರುವ ಆಹಾರ ಮತ್ತು ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದು, ಯಾವುದೇ ವಿದ್ಯಾರ್ಥಿಗಳ ಪ್ರಾಣಹಾನಿಯಾಗಿಲ್ಲ ಎಂದು ತೃಕ್ಕಾಕರ ಪುರಸಭೆಯ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸಾಮೂಹಿಕವಾಗಿ ಆಸ್ಪತ್ರೆಗೆ ದಾಖಲಾದ ನಂತರ ಪೋಷಕರು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಶಿಬಿರವನ್ನು ಸ್ಥಗಿತಗೊಳಿಸಲಾಯಿತು ಎಂದು ತೃಕ್ಕಾಕರ ಪುರಸಭೆಯ ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!