ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿ ಅಧ್ಯಕ್ಷ ಮತ್ತು ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ 
ದೇಶ

ವಕ್ಫ್ ಆಸ್ತಿ ವಿವಾದ: ರಾಜ್ಯ ಸರ್ಕಾರದ ಅಧಿಕಾರಿಗಳು ನಾಳೆ ಸಂಸದೀಯ ಸಮಿತಿ ಮುಂದೆ ಹಾಜರು

ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಗುರುವಾರದಿಂದ ಎರಡು ದಿನಗಳ ಕಾಲ ನಡೆಯುವ ಸಭೆ ನಡೆಸಲಿದೆ.

ನವದೆಹಲಿ: ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದದ ನಡುವೆ, ರಾಜ್ಯ ಸರ್ಕಾರದ ಅಧಿಕಾರಿಗಳು ಗುರುವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುವ ಸಂಸದೀಯ ಸಮಿತಿಯ ಮುಂದೆ ಹಾಜರಾಗಲು ನಿರ್ಧರಿಸಿದ್ದಾರೆ.

ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಗುರುವಾರದಿಂದ ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಒಡಿಶಾ ಮತ್ತು ದೆಹಲಿ ಸರ್ಕಾರಗಳ ಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದೆ.

ದೆಹಲಿ ಆಹಾರ ಮತ್ತು ಸರಬರಾಜು ಸಚಿವ ಇಮ್ರಾನ್ ಹುಸೇನ್ ಅವರು ಶುಕ್ರವಾರ ಸಮಿತಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿ ಸರ್ಕಾರದ ಪ್ರತಿನಿಧಿಗಳು ಸಾಕ್ಷ್ಯವನ್ನು ದಾಖಲಿಸಿದ್ದಾರೆ.

ರಾಜ್ಯದಲ್ಲಿ ರೈತರ 1500 ಎಕರೆಗೂ ಹೆಚ್ಚು ಭೂಮಿಯನ್ನು ವಕ್ಫ್ ಬೋರ್ಡ್ ವಶಪಡಿಸಿಕೊಳ್ಳುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗೆ ಸಮಿತಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ವಕ್ಫ್ ಆಸ್ತಿ ವಿವಾದದ ನಂತರ ಜಗದಾಂಬಿಕಾ ಪಾಲ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದರು ಮತ್ತು ವಕ್ಫ್ ಮಂಡಳಿಗೆ ಸೇರಿದ ಆಸ್ತಿ ಸಂಬಂಧ ರಾಜ್ಯ ಸರ್ಕಾರದಿಂದ ನೋಟಿಸ್ ಪಡೆದಿದ್ದ ರೈತರೊಂದಿಗೆ ಸಂವಾದ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್