ಸಾಂದರ್ಭಿಕ ಚಿತ್ರ 
ದೇಶ

2050ಕ್ಕೆ ಭಾರತದಲ್ಲಿ ವಿಶ್ವದಲ್ಲೇ ಅತಿಹೆಚ್ಚು ಮುಸ್ಲಿಮರು, ಹಿಂದೂಗಳ ಸಂಖ್ಯೆ ಗಣನೀಯ ಇಳಿಕೆ: Pew Research Center ವರದಿ

2050 ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದ್ದು, ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ವರದಿಯಲ್ಲಿ ಹೇಳಿದೆ.

ನವದೆಹಲಿ: 2050 ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದ್ದು, ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ವರದಿಯೊಂದು ಹೇಳಿದೆ.

ಅಮೇರಿಕನ್ ಚಿಂತಕರ ಚಾವಡಿ ಪ್ಯೂ ಸಂಶೋಧನಾ ಕೇಂದ್ರ ಈ ವರದಿ ನೀಡಿದ್ದು, 'ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಮುಸ್ಲಿಮರು ಅತ್ಯಂತ ಕಿರಿಯ ಸರಾಸರಿ ವಯಸ್ಸು (30) ಹೊಂದಿರುವುದರಿಂದ, ಅದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಗುಂಪಾಗಿದೆ.

2050 ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ. ಅಂತೆಯೇ ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ವರದಿಯಲ್ಲಿ ಹೇಳಿದೆ.

ಮುಸ್ಲಿಮರ ಸಂಖ್ಯೆ ಗಣನೀಯ ಏರಿಕೆ

ಮುಂಬರುವ ದಶಕಗಳಲ್ಲಿ ವಿಶ್ವದ ಜನಸಂಖ್ಯೆಯು ಶೇಕಡಾ 35 ರಷ್ಟು ಬೆಳೆಯುವ ನಿರೀಕ್ಷೆಯಿದ್ದರೂ, ಮುಸ್ಲಿಮರ ಸಂಖ್ಯೆ ಶೇಕಡಾ 73 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಪ್ರಮುಖವಾಗಿ 2050 ರ ಹೊತ್ತಿಗೆ ಮುಸ್ಲಿಮರ ಸಂಖ್ಯೆ 2.8 ಬಿಲಿಯನ್‌ಗೆ ತಲುಪುತ್ತದೆ. ವಾಸ್ತವವಾಗಿ, ಮುಸ್ಲಿಮರು ಇಡೀ ವಿಶ್ವದ ಜನಸಂಖ್ಯೆಗಿಂತ ವೇಗವಾಗಿ ಬೆಳೆಯುವ ಏಕೈಕ ಪ್ರಮುಖ ಧಾರ್ಮಿಕ ಗುಂಪಾಗಿದೆ.

2050ರ ವೇಳೆಗೆ ಭಾರತವು 31 ಕೋಟಿ ಮುಸ್ಲಿಮರನ್ನು ಹೊಂದಲಿದ್ದು, ಜಾಗತಿಕ ಮುಸ್ಲಿಂ ಜನಸಂಖ್ಯೆಯ 11% ರಷ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಫಲವತ್ತತೆಯ ಪ್ರಮಾಣದಿಂದಾಗಿ, ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯು ವೇಗವಾಗಿ ಬೆಳೆಯುವ ನಿರೀಕ್ಷೆಯಿದೆ. 2010 ರಲ್ಲಿ, ಮುಸ್ಲಿಮರ ಒಟ್ಟು ಜನಸಂಖ್ಯೆಯ 14.4% ರಷ್ಟಿತ್ತು. ಆದರೆ 2050ರ ವೇಳೆಗೆ ಇದು 18.4% ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಇಂಡೋನೇಷ್ಯಾ ಹಿಂದಿಕ್ಕಲಿರುವ ಭಾರತ

ಜಾಗತಿಕವಾಗಿ ಬಹುಪಾಲು ಮುಸ್ಲಿಮರು ಅಂದರೆ ಶೇಕಡಾ 62 ರಷ್ಟು, ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಇದರಲ್ಲಿ ಇಂಡೋನೇಷ್ಯಾ, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಇರಾನ್ ಮತ್ತು ಟರ್ಕಿಯಲ್ಲಿ ದೊಡ್ಡ ಜನಸಂಖ್ಯೆ ಸೇರಿದೆ. ಪ್ರಸ್ತುತ, ಇಂಡೋನೇಷ್ಯಾ ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ.

ಆದರೆ 2050ರ ವೇಳೆಗೆ ಭಾರತವು ಇಂಡೋನೇಷ್ಯಾವನ್ನು ಮುಸ್ಲಿಂ ಜನಸಂಖ್ಯೆಯಲ್ಲಿ ಹಿಂದಿಕ್ಕಲಿದ್ದು ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎನ್ನಲಾಗಿದೆ. ಪಾಕಿಸ್ತಾನವು ಎರಡನೇ ಅತಿ ಹೆಚ್ಚು ಮುಸ್ಲಿಮರನ್ನು (273 ಮಿಲಿಯನ್) ಹೊಂದುವ ನಿರೀಕ್ಷೆಯಿದೆ. ಪ್ರಸ್ತುತ, ಇಂಡೋನೇಷ್ಯಾ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದ್ದು, ಇಂಡೋನೇಷ್ಯಾವು 2050 ರ ವೇಳೆಗೆ 257 ಮಿಲಿಯನ್ ಮುಸ್ಲಿಮರೊಂದಿಗೆ ಮೂರನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆಯಿದೆ.

ಹಿಂದೂತ್ವ ವಿಶ್ವದ 3ನೇ ಅತಿದೊಡ್ಡ ಧರ್ಮ

ಇದೇ ವೇಳೆ ಹಿಂದೂ ಧರ್ಮವು 2050 ರ ವೇಳೆಗೆ ವಿಶ್ವದ ಮೂರನೇ ಅತಿದೊಡ್ಡ ಧರ್ಮವಾಗಲಿದೆ ಎಂದು ಹೇಳಿದ್ದು, ಈ ಅಧ್ಯಯನವು 2050 ರ ವೇಳೆಗೆ ವಿಶ್ವಾದ್ಯಂತ ಹಿಂದೂ ಜನಸಂಖ್ಯೆಯು ಸುಮಾರು 34% ರಷ್ಟು ಹೆಚ್ಚಾಗುತ್ತದೆ. ಅಂದರೆ 1.03 ಶತಕೋಟಿಗೆ ಏರಿಕೆಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ವಿಶ್ವದ ಒಟ್ಟು ಜನಸಂಖ್ಯೆಯಲ್ಲಿ ಹಿಂದೂಗಳು 14.9% ರಷ್ಟಿದ್ದಾರೆ. ಕ್ರಿಶ್ಚಿಯನ್ನರು 31.4% ಮತ್ತು ಮುಸ್ಲಿಮರು 29.7% ಇದ್ದಾರೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ.

ಹಿಂದೂಗಳ ಸಂಖ್ಯೆ ಗಣನೀಯ ಇಳಿಕೆ

ವಿಶ್ವದ ಈ ಕೆಲವು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಲ್ಲಿ ಹಿಂದೂಗಳ ಸಂಖ್ಯೆ ತೀವ್ರಗತಿಯಲ್ಲಿ ಇಳಿಕೆಯಾಗಲಿದೆ. ವರದಿಯ ಪ್ರಕಾರ 2050 ರಲ್ಲಿ ಮುಸ್ಲಿಂ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಲಿದೆ ಎನ್ನಲಾಗಿದೆ. ಹೌದು, 2010 ರಲ್ಲಿ ಶೇಕಡಾ 1.6 ರಷ್ಟಿದ್ದ ಜನಸಂಖ್ಯೆಯೂ 2050 ರಲ್ಲಿ ಶೇಕಡಾ 1.3 ರಷ್ಟು ಇಳಿಕೆ ಕಾಣಲಿದೆ. ಬಾಂಗ್ಲಾದೇಶದಲ್ಲಿ 2010 ರಲ್ಲಿ ಶೇಕಡಾ 8.5 ರಷ್ಟಿತ್ತು, ಆದರೆ 2050 ರಲ್ಲಿ ಹಿಂದೂಗಳ ಸಂಖ್ಯೆಯೂ ಶೇಕಡಾ 7.2 ಇಳಿಕೆಯಾಗಿದೆ. ಇನ್ನು ಉಳಿದಂತೆ ಅಫ್ಘಾನಿಸ್ತಾನದಲ್ಲಿಯೂ ಶೇಕಡಾ 0.4 ರಿಂದ 0.3 ರಷ್ಟು ಇರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುರೋಪ್‌ನಲ್ಲಿ ಮುಸ್ಲಿಂ ಜನಸಂಖ್ಯೆ

ಯುರೋಪ್‌ನಲ್ಲೂ ಮುಸ್ಲಿಂ ಜನಸಂಖ್ಯೆ ವೇಗವಾಗಿ ಬೆಳೆಯುತ್ತಿದೆ. 2050 ರ ವೇಳೆಗೆ ಎಲ್ಲಾ ಯುರೋಪಿಯನ್ನರಲ್ಲಿ ಶೇ.10% ರಷ್ಟು ಮುಸ್ಲಿಮರಾಗಿರುತ್ತಾರೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್ ಹೊರತುಪಡಿಸಿ, ತುಲನಾತ್ಮಕವಾಗಿ ಕಡಿಮೆ ಮುಸ್ಲಿಮರು ವಾಸಿಸುವ ಪ್ರತಿಯೊಂದು ಪ್ರದೇಶದಲ್ಲೂ ಮುಸ್ಲಿಮರು ಶೇಕಡಾವಾರು ಪ್ರಮಾಣದಲ್ಲಿ ಬೆಳೆಯುವ ನಿರೀಕ್ಷೆಯಿದೆ. ಮುಸ್ಲಿಮರು ವಿಶ್ವದ ಅತಿದೊಡ್ಡ ಧಾರ್ಮಿಕ ಗುಂಪಾಗಬಹುದು ಎಂದು ವರದಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT