ಸಿಡಬ್ಲ್ಯೂಸಿ ಸಭೆ PTI
ದೇಶ

ಸುಳ್ಳು, ದ್ವೇಷ ಹರಡುವವರ ವಿರುದ್ಧ ಹೋರಾಡಲು 'ನವ ಸತ್ಯಾಗ್ರಹ' ಅಗತ್ಯ: CWC ಸಭೆಯಲ್ಲಿ ಗಾಂಧಿ ಪರಂಪರೆ ರಕ್ಷಿಸುವ ಪ್ರತಿಜ್ಞೆ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸ್ಥಳದಲ್ಲಿಯೇ ಇಂದು ಐತಿಹಾಸಿಕ ಸಭೆ ನಡೆಯುತ್ತಿದೆ.

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆ ಹಾಗೂ ರಾಜಕೀಯ ಮತ್ತು ಚುನಾವಣಾ ಸವಾಲುಗಳಿಗೆ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಯು ನವ ಸತ್ಯಾಗ್ರಹ ಬೈಠಕ್ 2025 ಆರಂಭಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸ್ಥಳದಲ್ಲಿಯೇ ಇಂದು ಐತಿಹಾಸಿಕ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ಇತರರು ಐತಿಹಾಸಿಕ ಸಭೆಯಲ್ಲಿ ಭಾಗವಹಿಸಿದ್ದಾರೆ.

ಮುಂಬರುವ ಸವಾಲುಗಳಗನ್ನು ಎದುರಿಸಲು ಸಿದ್ಧರಾಗಲು ಕಾಂಗ್ರೆಸ್ ಮುಂದಿನ ವರ್ಷಕ್ಕೆ ಕ್ರಿಯಾ ಯೋಜನೆಯನ್ನು CWC ಸಭೆಯಲ್ಲಿ ನಿರ್ಧರಿಸಲಿದೆ. ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು. ಇದರ ವಿರುದ್ಧ ಪ್ರಬಲ ಹೋರಾಟ ಮಾಡುವ ಬಗ್ಗೆ ವಿರೋಧ ಪಕ್ಷವು ತೀರ್ಮಾನಿಸಲಿದೆ. ಮಹಾತ್ಮ ಗಾಂಧಿಯವರ ಪರಂಪರೆಯನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಉತ್ತೇಜಿಸಲು ಕಾಂಗ್ರೆಸ್ ತನ್ನನ್ನು ತಾನು ಪುನಃ ಸಮರ್ಪಿಸಿಕೊಳ್ಳುತ್ತದೆ. ನಾವೆಲ್ಲರೂ ಒಟ್ಟಾಗಿ ಬಾಪು ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತೇವೆ ಮತ್ತು ದ್ವೇಷದ ರಾಜಕೀಯವನ್ನು ಸತ್ಯ ಮತ್ತು ಅಹಿಂಸೆಯಿಂದ ಸೋಲಿಸುತ್ತೇವೆ ಎಂದು ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದರು.

ಇದಕ್ಕೂ ಮುನ್ನ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಂಘಟನಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮಾತನಾಡಿ, ವಿಸ್ತೃತ ಸಿಡಬ್ಲ್ಯುಸಿ ಸಭೆಯಲ್ಲಿ ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಸಂವಿಧಾನ ಮತ್ತು ಅದರ ಶಿಲ್ಪಿ ಅಂಬೇಡ್ಕರ್ ಅವರ ಮೇಲೆ ಬಿಜೆಪಿಯ ಆರೋಪದ ದಾಳಿಯ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು. ದೇಶವು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಿದ ನಂತರ, ಅವುಗಳನ್ನು ಪರಿಹರಿಸಲು ಮತ್ತು ಸಂವಿಧಾನದ ಮೇಲೆ ಬಿಜೆಪಿಯ ಆಪಾದಿತ ದಾಳಿಯನ್ನು ಎದುರಿಸಲು ಕಾಂಗ್ರೆಸ್ ಸ್ಪಷ್ಟ ಆಲೋಚನೆಗಳೊಂದಿಗೆ ಹೊರಬರುತ್ತದೆ ಎಂದು ವೇಣುಗೋಪಾಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT