ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಟಾಲಿವುಡ್ ಉದ್ಯಮದ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ಸಭೆ ನಡೆಯಿತು. 
ದೇಶ

ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ: ಟಾಲಿವುಡ್‌ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಇಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ತೆಲಂಗಾಣ ರಾಜ್ಯ ಪೊಲೀಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಟಾಲಿವುಡ್ ಉದ್ಯಮದ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ಸಭೆ ನಡೆಯಿತು.

ಹೈದರಾಬಾದ್‌: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು, ನಿರ್ದೇಶಕರು ಮತ್ತು ನಿರ್ಮಾಪಕರ ನಿಯೋಗಕ್ಕೆ ತಿಳಿಸಿದ್ದಾರೆ.

ಇಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ತೆಲಂಗಾಣ ರಾಜ್ಯ ಪೊಲೀಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಟಾಲಿವುಡ್ ಉದ್ಯಮದ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ನಡುವೆ ಸಭೆ ನಡೆಯಿತು.

ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ(ಎಫ್‌ಡಿಸಿ) ಅಧ್ಯಕ್ಷ ದಿಲ್ ರಾಜು ನೇತೃತ್ವದಲ್ಲಿ ಟಾಲಿವುಡ್‌ನ ಪ್ರಭಾವಿ ವ್ಯಕ್ತಿಗಳ ನಿಯೋಗ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿತು. ನಿಯೋಗದಲ್ಲಿ ನಾಗಾರ್ಜುನ, ವರುಣ್ ತೇಜ್, ಸಾಯಿ ಧರಮ್ ತೇಜ್, ಕಲ್ಯಾಣ್ ರಾಮ್, ಶಿವ ಬಾಲಾಜಿ, ಅಡವಿ ಶೇಷ್, ನಿತಿನ್ ಮತ್ತು ವೆಂಕಟೇಶ್ ಸೇರಿದಂತೆ ಹಲವು ನಟ, ನಿರ್ದೇಶಕರು ಇದ್ದರು.

ಕಳೆದ ಡಿಸೆಂಬರ್ 4 ರಂದು, ನಟ ಅಲ್ಲು ಅರ್ಜುನ್ ಅವರು ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ದಿ ರೂಲ್‌ನ ಪ್ರಥಮ ಪ್ರದರ್ಶನಕ್ಕೆ ತೆರಳಿದ್ದರಿಂದ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಆಕೆಯ ಮಗುವಿಗೆ ಗಾಯಗಳಾಗಿದ್ದವು.

ಘಟನೆಯ ನಂತರ, ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!