ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಗೌರವ ನಮನ 
ದೇಶ

ನವದೆಹಲಿ: ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ, AICC ಕೇಂದ್ರ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ತ್ರಿವರ್ಣ ಧ್ವಜ ಹೊದಿಸಿದ ಪಾರ್ಥಿವ ಶರೀರಕ್ಕೆ ಪಕ್ಷ ಬೇಧ ಮರೆತು ನಾಯಕರು ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಮತ್ತಿತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅವರ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಕ್ರವಾರ ಅಂತಿಮ ನಮನ ಸಲ್ಲಿಸಿದರು.

ತ್ರಿವರ್ಣ ಧ್ವಜ ಹೊದಿಸಿದ ಪಾರ್ಥಿವ ಶರೀರಕ್ಕೆ ಪಕ್ಷ ಬೇಧ ಮರೆತು ನಾಯಕರು ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಮತ್ತಿತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಅಮೆರಿಕದಲ್ಲಿರುವ ಮನ ಮೋಹನ್ ಸಿಂಗ್ ಅವರ ಮಗಳಿಗಾಗಿ ಕುಟುಂಬ ಕಾಯುತ್ತಿದ್ದು, ಅವರು ಬಂದ ನಂತರ ನಾಳೆ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ನವದೆಹಲಿಯ ನಿವಾಸದಲ್ಲಿಯೇ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಳೆ ಬೆಳಗ್ಗೆ 8 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಅಲ್ಲಿ ಬೆಳಗ್ಗೆ 8-30 ರಿಂದ 9-30ರವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಬೆಳಗ್ಗೆ 9-30ಕ್ಕೆ ಅಂತಿಮ ಯಾತ್ರೆ ಶುರುವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ಸಂಜೆ 5.30ಕ್ಕೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಿಡಬ್ಲ್ಯುಸಿ ಸದಸ್ಯರು, ಖಾಯಂ ಮತ್ತು ವಿಶೇಷ ಆಹ್ವಾನಿತರನ್ನು ಒಳಗೊಂಡ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮನ ಮೋಹನ್ ಸಿಂಗ್ ಅವರ ನಿಧನಕ್ಕೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ದೇಶದ ಜನತೆ ಹಾಗೂ ಅಭಿವೃದ್ಧಿಗಾಗಿ ಅವರ ಕೊಡುಗೆ ಯಾವಾಗಲೂ ಗೌರವಯುತವಾದದ್ದು ಎಂದಿದ್ದಾರೆ.

92 ವರ್ಷದ ಮನಮೋಹನ್ ಸಿಂಗ್ ಅವರ ಗುರುವಾರ ತಡರಾತ್ರಿ ವಯೋಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT