ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 
ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ, ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ!

ದಿವಂಗತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಇಂದು ಸಚಿವ ಸಂಪುಟ ಸಭೆ ಕರೆದಿದ್ದು, ದಿನದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಶನಿವಾರ ನಡೆಯಲಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಶುಕ್ರವಾರ ತಿಳಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರ ನಿಧನ ದೇಶಕ್ಕಾಗಿರುವ ದೊಡ್ಡ ನಷ್ಟ. "ಡಾ. ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಮತ್ತು ದೇಶದ ನಿಜವಾದ ಮಾದರಿ ವ್ಯಕ್ತಿಯಾಗಿದ್ದರು. ಸ್ವಾತಂತ್ರ್ಯ ನಂತರದ ಹೀರೋ ಮನಮೋಹನ್ ಸಿಂಗ್. ಅವರ ಧ್ಯೇಯ ಮತ್ತು ದೇಶವನ್ನು ಆಳುವ ಸಾಮರ್ಥ್ಯ ಎಲ್ಲರಿಗೂ ಸಾಕ್ಷಿಯಾಗಿದೆ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿರುವ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಈ ನಡುವೆ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್ ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತಲುಪಿದ್ದು, ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈಗಾಗಲೇ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಡಾ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಅಂತಿಮ ನಮನ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

ದಿವಂಗತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಇಂದು ಸಚಿವ ಸಂಪುಟ ಸಭೆ ಕರೆದಿದ್ದು, 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲು ಸಜ್ಜಾಗಿದೆ. ಇದಲ್ಲದೆ, ದಿನದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

SCROLL FOR NEXT