ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಅಂತಿಮ ನಮನ ಸಲ್ಲಿಸಿದರು. Photo | PTI
ದೇಶ

ಮನಮೋಹನ್ ಸಿಂಗ್ ನಿಧನ: ಭಾರತದ ಸರ್ವಶ್ರೇಷ್ಠ ವಿತ್ತ ಸಚಿವನಿಗೆ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ಅಂತಿಮ ನಮನ

ಪ್ರಧಾನಿ ಮೋದಿ ಅವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಆಗಮಿಸಿ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ದೆಹಲಿಯ ಅವರ ನಿವಾಸದಲ್ಲಿದ್ದು, ಗಣ್ಯಾತಿಗಣ್ಯರು ಸಿಂಗ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಮನಮೋಹನ್‌ ಸಿಂಗ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಮೋದಿಯವರು, ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.

ಪ್ರಧಾನಿ ಮೋದಿ ಅವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಆಗಮಿಸಿ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಇವರ ಜೊತೆಗೆ ಕೇಂದ್ರ ಸಚಿವ ಜೆಪಿ ನಡ್ಡಾ ಸಹಿತ ಇತರೆ ಬಿಜೆಪಿ ನಾಯಕರು ಸಿಂಗ್ ಸ್ವಗೃಹಕ್ಕೆ ಬಂದು ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಿದರು.

ಉಳಿದಂತೆ ಕಾಂಗ್ರೆಸ್​ ನಾಯಕರಾದ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ, ಸಂಸದ ರಾಹುಲ್​ ಗಾಂಧಿ, ಹಾಗೂ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಡಾ. ಸಿಂಗ್​ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.

ಡಾ.ಮನಮೋಹನ್ ಸಿಂಗ್‌ ಅವರು ಪಶ್ಚಿಮ್‌ ಪಂಜಾಬ್‌ನಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದರು. ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿಯಾಗಿ ಮನಮೋಹನ್ ಸಿಂಗ್‌ 2004ರಿಂದ 2014ರ ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಏಕೈಕ ಅಲ್ಪಸಂಖ್ಯಾತರೊಬ್ಬರು ಅಂದ್ರೆ ಸಿಖ್‌ ಸಮುದಾಯದವರು ಪ್ರಧಾನಮಂತ್ರಿಯಾಗಿರೋ ಕೀರ್ತಿ ಮನಮೋಹನ್‌ ಸಿಂಗ್‌ ಅವರಿಗೆ ಸಲ್ಲುತ್ತದೆ.

ಮನಮೋಹನ್‌ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್‌ ಬ್ರಿಟನ್‌ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ವ್ಯಾಂಸಗ ಮಾಡಿದ್ರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್‌ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976–80) ಹಾಗೂ ಆರ್‌‌ಬಿಐ ಗವರ್ನರ್ (1982–85) ಸೇವೆ ಸಲ್ಲಿಸಿದ್ದಾರೆ.

ನಾಳೆ ಡಾ.ಮನಮೋಹನ್‌ ಸಿಂಗ್ ಅವರ ಅಂತಿಮ ದರ್ಶನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದ್ದು, ನಂತರ ದೆಹಲಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT