ಮನಮೋಹನ್ ಸಿಂಗ್ ಅಂತಿಮ ಸಂಸ್ಕಾರ 
ದೇಶ

Manmohan Singh Funeral: ಅಗ್ನಿ ಸ್ಪರ್ಶ ಮಾಡಿದ ಮಗಳು; ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ!

ಮನಮೋಹನ್ ಸಿಂಗ್ ಅವರ ಪುತ್ರಿ ತಮ್ಮ ತಂದೆಯ ಚಿತೆಗೆ ಅಗ್ಮಿ ಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ವೇಳೆ ಉಪಸ್ಥಿತರಿದ್ದ ನಾಯಕರು ಅವರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಿದರು.

ನವದೆಹಲಿ: ದೇಶಕಂಡ ಅಪರೂಪದ ರಾಜಕಾರಣಿ ಹಾಗೂ ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆದಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು.

ಮನಮೋಹನ್ ಸಿಂಗ್ ಅವರ ಪುತ್ರಿ ತಮ್ಮ ತಂದೆಯ ಚಿತೆಗೆ ಅಗ್ಮಿ ಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ವೇಳೆ ಉಪಸ್ಥಿತರಿದ್ದ ನಾಯಕರು ಅವರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನವದೆಹಲಿಯ ಸ್ವಗೃಹದಿಂದ ಕಾಂಗ್ರೆಸ್‌ನ ಪ್ರಧಾನ ಕಚೇರಿಗೆ ಪಾರ್ಥಿವ ಶರೀರವನ್ನು ಕರೆ ತಂದ ಬಳಿಕ ಅಲ್ಲಿ ಅವರಿಗೆ ಅಂತಿಮ ಗೌರವ ಸಲ್ಲಿಸಲಾಯಿತು. ಆ ಬಳಿಕ ನಿಗಮಬೋಧ್ ಘಾಟ್‌ಗೆ ಅಂತಿಮ ಯಾತ್ರೆಯನ್ನು ಸಾವಿರಾರು ಮಂದಿಯ ಸಮ್ಮುಖದಲ್ಲಿ ಕರೆತರಲಾಯಿತು. ಪಾರ್ಥೀವ ಶರೀರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೆಗಲು ಕೊಟ್ಟರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ವಿದಾಯ ಹೇಳಲು ದೆಹಲಿಯ ನಿಗಮಬೋಧ್ ಘಾಟ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ರಾಜ್ಯಗಳ ಸಿಎಂಗಳು ಸಹಿತ ಕೇಂದ್ರ ಸಚಿವರುಗಳು, ಕಾಂಗ್ರೆಸ್‌ ನಾಯಕರುಗಳು ಹಾಜರಿದ್ದರು. ಈ ಎಲ್ಲಾ ನಾಯಕರು ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರ ನಾಯಕರುಗಳು ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ ಬಳಿಕ, ಮೂರು ಸೇನಾ ಪಡೆಗಳಿಂದ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮನಮೋಹನ್ ಸಿಂಗ್ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಬಳಿಕ ಸಿಖ್ ಧರ್ಮದ ಧಾರ್ಮಿಕ ಕ್ರಮದಂತೆ ಶ್ಲೋಕಗಳನ್ನು ಪಠಣೆ ಮಾಡಿ, ಮಧ್ಯಾಹ್ನ 12.55 ಕ್ಕೆ ಸರಿಯಾಗಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು.

ನಿಗಮಬೋಧ್ ಘಾಟ್‌ಗೆ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ತಲುಪಿದ ಬಳಿಕ ಅಲ್ಲಿ ಅವರಿಗೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆಯ ವೇಳೆ ಬಂದಿದ್ದ ಲಕ್ಷಾಂತರ ಮಂದಿ ನಿಗಮಬೋಧ್ ಘಾಟ್‌ನ ಹೊರಭಾಗದಲ್ಲಿ ನರೆದಿದ್ದರು. ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಭಾರತ ಮಾತ್ರವಲ್ಲದೇ ಇಡೀ ವಿಶ್ವಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತಂದ ನವಭಾರತದ ಆರ್ಥಿಕತೆಯ ನಿರ್ಮಾತೃ, ದೇಶ ಕಂಡ ಶ್ರೇಷ್ಠ ಪ್ರಧಾನಿಯನ್ನು ದೇಶವು ತುಂಬಿದ ಕಣ್ಣುಗಳಿಂದ ಬೀಳ್ಕೊಟ್ಟಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT