ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಬಹು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು 
ದೇಶ

ಜೈಪುರ ಎಲ್‌ಪಿಜಿ ಟ್ಯಾಂಕರ್ ದುರಂತ: ಮೃತರ ಸಂಖ್ಯೆ 20ಕ್ಕೆ ಏರಿಕೆ, ಹಲವರಿಗೆ ಮುಂದುವರಿದ ಚಿಕಿತ್ಸೆ

ವ್ಯಕ್ತಿ ಸಾವಿಗೀಡಾಗಿರುವುದನ್ನು ದೃಢಪಡಿಸಿದ ಎಸ್‌ಎಂಎಸ್ ಆಸ್ಪತ್ರೆ ಅಧೀಕ್ಷಕ ಡಾ ಸುಶೀಲ್ ಭಾಟಿ, ಸದ್ಯ ಏಳು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಜೈಪುರ: ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮತ್ತೋರ್ವ ವ್ಯಕ್ತಿ ಶನಿವಾರ ಇಲ್ಲಿನ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿ ಸಾವಿಗೀಡಾಗಿರುವುದನ್ನು ದೃಢಪಡಿಸಿದ ಎಸ್‌ಎಂಎಸ್ ಆಸ್ಪತ್ರೆ ಅಧೀಕ್ಷಕ ಡಾ ಸುಶೀಲ್ ಭಾಟಿ, ಸದ್ಯ ಏಳು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಅಪಘಾತದಲ್ಲಿ ಪಾರಾದ ವ್ಯಕ್ತಿಯೊಬ್ಬರು ಮಾತನಾಡಿ, ಜೋರಾದ ಸ್ಫೋಟದ ಸದ್ದನ್ನು ಕೇಳಿದಾಗ ನಾವು ಕೆಲವು ಕಿಲೋಮೀಟರ್ ದೂರದಲ್ಲಿದ್ದೆವು. ಜ್ವಾಲೆಗಳು ಆಕಾಶದೆತ್ತರಕ್ಕೆ ಚಿಮ್ಮಿದವು ಮತ್ತು ಕ್ಷಣಗಳಲ್ಲಿಯೇ ನಮ್ಮ ಬಸ್ ಅನ್ನು ಬೆಂಕಿ ಆವರಿಸಿತು. ಜನರು ಕಿರುಚುತ್ತಿದ್ದರು ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು ಆದರೆ, ಬಾಗಿಲು ಲಾಕ್ ಆಗಿತ್ತು. ಆಗ ಸಂಪೂರ್ಣ ಗಾಬರಿಯಾಗಿತ್ತು' ಎಂದು ಅವರು ಹೇಳಿದರು.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಎಸ್‌ಎಂಎಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಮಾತನಾಡಿದ್ದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

'ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತದಲ್ಲಿ ಉಂಟಾದ ಸಾವುನೋವುಗಳ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಎಸ್‌ಎಂಎಸ್ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯರಿಗೆ ತಕ್ಷಣ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ' ಎಂದು ಸಿಎಂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT