ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ ಆರಂಭ 
ದೇಶ

ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು: ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ ಆರಂಭ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ

ಮಾಜಿ ಪ್ರಧಾನಿಯ ಪ್ರಾರ್ಥಿವ ಶರೀರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ​ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮನಮೋಹನ್​ ಸಿಂಗ್​ ನಿಧನಕ್ಕೆ ಇಡೀ ದೇಶವೇ ಕಂಬನಿ ಮುಡಿಯುತ್ತಿದ್ದು, ಗಣ್ಯಾತಿಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿ ತಲುಪಿದ್ದು, ದೇಶದ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಮಾಜಿ ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ​ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಇದೀಗ ಕಾಂಗ್ರೆಸ್​ ಕಚೇರಿಯಿಂದ ಮನಮೋಹನ್​ ಸಿಂಗ್​ ಅವರ ಅಂತಿಮ ಯಾತ್ರೆ ಆರಂಭವಾಗಿದೆ.

ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು.

ಮನಮೋಹನ್ ಸಿಂಗ್ 1932ರ ಸೆಪ್ಟೆಂಬರ್ 26ರಂದು ಜನಿಸಿದರು. ಶ್ರೇಷ್ಠ ಅರ್ಥಶಾಸ್ತ್ರಜ್ಞ ಮಾತ್ರವಲ್ಲದೇ 1982-1985ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದರು. 2004-2014ರ ಅವಧಿಯಲ್ಲಿ ದೇಶದ 13ನೇ ಪ್ರಧಾನಿಯಾಗಿದ್ದರು. ಹಣಕಾಸು ಸಚಿವರಾಗಿ 1991 ಮತ್ತು 1996ರ ನಡುವೆ ಐದು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆರ್ಥಿಕ ಸುಧಾರಣೆಗಳ ಸಮಗ್ರ ನೀತಿಯನ್ನು ಪರಿಚಯಿಸುವಲ್ಲಿ ಅವರ ಪಾತ್ರವನ್ನು ವಿಶ್ವಾದ್ಯಂತ ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT