ನರ್ಸ್ ನಿಮಿಷಾ ಪ್ರಿಯಾ  
ದೇಶ

ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್: ಸಾಧ್ಯವಿರುವ ಎಲ್ಲಾ ರೀತಿಯ ನೆರವು- MEA

ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಸೋಮವಾರ ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆಗೆ ಅನುಮೋದನೆ ನೀಡಿದ ನಂತರ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಹೇಳಿಕೆ ನೀಡಿದೆ.

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಇರುವ ಪರ್ಯಾಯ ಆಯ್ಕೆಗಳನ್ನು ಹುಡುಕಾಡಲು ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭಾರತ ಮಂಗಳವಾರ ಹೇಳಿದೆ.

ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಸೋಮವಾರ ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆಗೆ ಅನುಮೋದನೆ ನೀಡಿದ ನಂತರ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಹೇಳಿಕೆ ನೀಡಿದೆ. ಯೆಮೆನ್ ಪ್ರಜೆಯನ್ನು ಕೊಂದಿದ್ದಕ್ಕಾಗಿ ನಿಮಿಷಾ ಪ್ರಿಯಾ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ.

ವರದಿಗಳ ಪ್ರಕಾರ ಒಂದು ತಿಂಗಳೊಳಗೆ ಮರಣದಂಡನೆ ಜಾರಿಯಾಗುವ ನಿರೀಕ್ಷೆಯಿದೆ. ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾಗೆ ಶಿಕ್ಷೆಯ ಬಗ್ಗೆ ನಮಗೆ ತಿಳಿದಿದೆ. ಉಳಿದಿರುವ ಪರ್ಯಾಯ ಆಯ್ಕೆಗಳನ್ನು ಅವರ ಕುಟುಂಬ ಹುಡುಕುತ್ತಿದೆ ಎಂಬುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಸರ್ಕಾರ ಈ ವಿಷಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ನೀಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣದೀರ್ ಜೈಸ್ವಾಲ್ ಹೇಳಿದ್ದಾರೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲಂಗೋಡ್‌ನ ನರ್ಸ್ ನಿಮಿಷಾ ಪ್ರಿಯಾ 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಹಲವಾರು ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ ನಂತರ ತನ್ನದೇ ಆದ ಸ್ವಂತ ಕ್ಲಿನಿಕ್ ಸ್ಥಾಪನೆಯ ಯೋಜನೆ ಹೊಂದಿದ್ದರು.

2017 ರಲ್ಲಿ ಸ್ಥಳೀಯ ಪಾಲುದಾರ ತಲಾಲ್ ಅಬ್ದೋ ಮಹದಿ ಅವರೊಂದಿಗೆ ಜಗಳವಾಡಿದ್ದರು. ಹಣ ದುರುಪಯೋಗಪಡಿಸಿಕೊಳ್ಳುವ ಪ್ರಯತ್ನವನ್ನು ಆಕೆ ವಿರೋಧಿಸಿದ್ದರು ಎಂದು ಪ್ರಿಯಾ ಕುಟುಂಬ ಸದಸ್ಯರು ಹೇಳುತ್ತಾರೆ. ಆತ ವಶಪಡಿಸಿಕೊಂಡಿದ್ದ ತನ್ನ ಪಾಸ್‌ಪೋರ್ಟ್ ಅನ್ನು ಮರುಪಡೆಯುವ ಪ್ರಯತ್ನದಲ್ಲಿ ನಿದ್ದೆ ಭರಿಸುವ ಇಂಜೆಕ್ಷನ್ (sedatives) ಹಾಕಿದ್ದಾರೆ. ಆತನ ಸಾವಿಗೆ ಇದೇ ಕಾರಣ ಎಂಬ ಆರೋಪವಿದೆ.

ಬಳಿಕ ಯೆಮೆನ್‌ನಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಆಕೆಯನ್ನು ಬಂಧಿಸಲಾಗಿತ್ತು. 2018 ರಲ್ಲಿ ಅಪರಾಧಿ ಎಂದು ಘೋಷಿಸಲಾಯಿತು. 2020 ರಲ್ಲಿ ಸನಾದಲ್ಲಿನ ವಿಚಾರಣಾ ನ್ಯಾಯಾಲಯವು ಆಕೆಗೆ ಮರಣದಂಡನೆ ವಿಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

SCROLL FOR NEXT