ಜಗಜಿತ್ ಸಿಂಗ್ ದಲ್ಲೆವಾಲ್ 
ದೇಶ

ರೈತರ ಪ್ರತಿಭಟನೆ: ಆಸ್ಪತ್ರೆಗೆ ದಲ್ಲೆವಾಲ್ ಸ್ಥಳಾಂತರ, ಮನವೊಲಿಕೆಗೆ ಮಾತುಕತೆ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಪ್ರತಿಭಟನಾನಿರತ ರೈತರೊಂದಿಗಿನ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಮತ್ತು ಹಿಂದಿನ ಆದೇಶಗಳ ಪಾಲನೆಯನ್ನು ಮಾತ್ರ ಬಯಸುತ್ತದೆ ಎಂದು ಪೀಠ ಹೇಳಿದೆ.

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 35 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜನವರಿ 26ಕ್ಕೆ ಮಂಗಳವಾರ ಮುಂದೂಡಿದೆ.

ಈ ಹಿಂದೆ ಡಿಸೆಂಬರ್ 20ರಂದು ನೀಡಿದ್ದ ಆದೇಶ ಪಾಲನೆಗಾಗಿ ಮೂರು ದಿನಗಳ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ಪಂಜಾಬ್ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ತಿಳಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಸುಧಾಂಶು ಧುಲಿಯಾ ಅವರ ರಜಾಕಾಲದ ಪೀಠವು, ಜನವರಿ 2 ರಂದು ಹೆಚ್ಚಿನ ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡಿದೆ.

ಸಂಧಾನಕಾರರ ತಂಡವು ಪ್ರತಿಭಟನಾ ಸ್ಥಳದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸುತ್ತಿದೆ ಮತ್ತು ದಲ್ಲೆವಾಲ್ ಅನ್ನು ಖಾನೌರಿ ಗಡಿಯ ಪಂಜಾಬ್ ಭಾಗದಲ್ಲಿರುವ ಹತ್ತಿರದ ತಾತ್ಕಾಲಿಕ ಆಸ್ಪತ್ರೆಗೆ ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಿಂಗ್ ಹೇಳಿದರು.

ಪ್ರತಿಭಟನಾನಿರತ ರೈತರೊಂದಿಗಿನ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಮತ್ತು ಹಿಂದಿನ ಆದೇಶಗಳ ಪಾಲನೆಯನ್ನು ಮಾತ್ರ ಬಯಸುತ್ತದೆ ಎಂದು ಪೀಠ ಹೇಳಿದೆ. ಸಿಂಗ್ ಸಲ್ಲಿಸಿದ್ದ ಅಹವಾಲುಗಳನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಮುಂದೂಡಿತು.

ಡಿಸೆಂಬರ್ 28 ರಂದು ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸರ್ವೋಚ್ಚ ನ್ಯಾಯಾಲಯವು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ದಲ್ಲೆವಾಲ್ ಅವರು ನವೆಂಬರ್ 26 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel