ವಂದೇ ಭಾರತ್ ಎಕ್ಸ್‌ಪ್ರೆಸ್ 
ದೇಶ

ಕೇಂದ್ರ ಬಜೆಟ್ 2024: ರೈಲ್ವೆಗೆ ದೊಡ್ಡ ಕೊಡುಗೆ, 40 ಸಾವಿರ ಸಾಮಾನ್ಯ ಬೋಗಿಗಳು ವಂದೇ ಭಾರತ್ ದರ್ಜೆಗೆ!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದು ಬಜೆಟ್‌ನ ಆರಂಭಿಕ ಘೋಷಣೆಗಳಲ್ಲಿಯೇ ಅವರು ಸಾರಿಗೆಗಾಗಿ ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದು ಬಜೆಟ್‌ನ ಆರಂಭಿಕ ಘೋಷಣೆಗಳಲ್ಲಿಯೇ ಅವರು ಸಾರಿಗೆಗಾಗಿ ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ.

ಸಾಮಾನ್ಯ ರೈಲುಗಳ ಬೋಗಿಗಳನ್ನು ವಂದೇ ಭಾರತ್ ದರ್ಜೆಗೇರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದಲ್ಲದೇ ಮೆಟ್ರೋ ಮತ್ತು ನಮೋ ರೈಲನ್ನು ಇತರ ನಗರಗಳಿಗೂ ವಿಸ್ತರಿಸಲಿದೆ.

ಸುಮಾರು 40 ಸಾವಿರ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ದರ್ಜೆಗೆ ಪರಿವರ್ತಿಸಲಾಗುವುದು ಎಂದು ಸೀತಾರಾಮನ್ ಮಾಹಿತಿ ನೀಡಿದ್ದಾರೆ. ಇದರೊಂದಿಗೆ 3 ಹೊಸ ರೈಲು ಕಾರಿಡಾರ್‌ಗಳ ನಿರ್ಮಾಣವನ್ನೂ ಸರ್ಕಾರ ಘೋಷಿಸಿದ್ದು, ಸರಕು ಸಾಗಣೆ ಕಾರಿಡಾರ್‌ನ ಕಾಮಗಾರಿಯೂ ನಡೆಯುತ್ತಿದೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿಮಾನ ನಿಲ್ದಾಣಗಳ ಸಂಖ್ಯೆಯೂ ಹೆಚ್ಚಿದೆ ಎಂದರು. ಪ್ರಸ್ತುತ, ದೇಶದಲ್ಲಿ 149 ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Viral ವಿಡಿಯೋದಲ್ಲಿರುವುದು ನಾನಲ್ಲ, ಒಂದು ವೇಳೆ ನಾನೇ ಆಗಿದ್ದರೂ ಏನು ಇವಾಗ? ತಮಿಳುನಾಡು ಸಚಿವೆ ಕೀರ್ತನಾ ಕಿಡಿ! ಮಲೇಷ್ಯಾ ಮಹಿಳೆ ದೂರು ದಾಖಲು!