ನವದೆಹಲಿ: ಮೀನುಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮೀನುಗಾರಿಕೆಗೆ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನ್ನು ಲೋಕಸಭೆಯಲ್ಲಿ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಮೀನುಗಾರಿಕೆಗೆ ಹೊಸ ಸಚಿವಾಲಯ ಸ್ಥಾಪಿಸುವುದಾಗಿ ಹಾಗೂ ಮೀನುಗಾರಿಕೆ ಯೋಜನೆಯನ್ನು ಸರ್ಕಾರ ಉತ್ತೇಜಿಸುತ್ತದೆ ಎಂದು ಹೇಳಿದರು.
ರೈತರಿಗೆ ಆಧುನಿಕ ತಂತ್ರಜ್ಞಾನದ ಸಹಾಯಕ್ಕಾಗಿ ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಲಾಗಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ. ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ನೆರವು ನೀಡಲಾಗಿದೆ. ಮತ್ಸ್ಯ ಸಂಪದ ಯೋಜನೆ ಮೂಲಕ 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.