ಚಂಪೈ ಸೊರೆನ್ 
ದೇಶ

ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ

ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಂಚಿ: ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಂಚಿಯ ರಾಜಭವನದ ದರ್ಬಾರ್ ಹಾಲ್‌ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಗುರುವಾರ ಚಂಪೈ ಸೊರೇನ್ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಲು ಆಹ್ವಾನ ಕೊಟ್ಟಿದ್ದರು. ರಾಜ್ಯದಲ್ಲಿ 18 ಗಂಟೆಗಳ ಕಾಲ ಯಾವುದೇ ಸರ್ಕಾರವಿಲ್ಲ. ಗೊಂದಲದ ಪರಿಸ್ಥಿತಿ ಇದೆ. ಸಾಂವಿಧಾನಿಕ ಮುಖ್ಯಸ್ಥರಾಗಿರುವ ನೀವು ಶೀಘ್ರದಲ್ಲೇ ಜನಪ್ರಿಯ ಸರ್ಕಾರ ರಚನೆಗೆ ಕ್ರಮಗಳನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ರಾಜ್ಯಪಾಲರು ಹೇಳಿದ್ದರು.

ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!