ಶಿವಕುಮಾರ ಸ್ವಾಮೀಜಿ 
ದೇಶ

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಿ: ಕಾಂಗ್ರೆಸ್

ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಶ್ರೀ ಶಿವಕುಮಾರ ಸ್ವಾಮೀಜಿ ಅವರು ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಎನಿಸಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಲಿಂಗೈಕ್ಯ ಶ್ರೀಗಳಿಗೆ ಆದ್ಯತೆ ನೀಡಬೇಕು. ಅವರಿಗೆ ಮರಣೋತ್ತರ ಭಾರತ ರತ್ನ ನೀಡಿ ಎಂದು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಶಿವಕುಮಾರ ಸ್ವಾಮೀಜಿ ಅವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡಿದರು. ಯಾವುದೇ ಜಾತಿ, ಧರ್ಮ ಭೇದ ಮಾಡಿದೆ ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರು ಗಳಿಸುವಂತೆ ಮಾಡಿದವರು ಅವರು ಎಂದು ರಣದೀಪ್ ಸುರ್ಜೇವಾಲಾ ವಿವರಣೆ ನೀಡಿದ್ದಾರೆ.

ಶಿವಕುಮಾರ ಸ್ವಾಮೀಜಿ ಅವರು ನಿಜವಾಗಿಯೂ ಭಾರತದ ಅಮೂಲ್ಯ ರತ್ನ, ಕರ್ನಾಟಕದ ಈ ಮಹಾನ್‌ ಪುರುಷ ಶಿವಕುಮಾರ್ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಬೇಕೆನ್ನುವುದು ನನ್ನ ಭಾವನೆ. ಇದು ಆರೂವರೆ ಕೋಟಿ ಕನ್ನಡಿಗರ ಮಹಾಭಿಲಾಷೆಯೂ ಆಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಿಸಿದ ಬೆನ್ನಲ್ಲೇ ಇದೀಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಿ ಎಂಬ ಕೂಗು ಜೋರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದಲ್ಲಿ 'ಪ್ರಜಾಪ್ರಭುತ್ವ ಗಡಿಪಾರು'; ಚುನಾವಣೆ ಮುಕ್ತವಾಗಿರುವುದಿಲ್ಲ: ಯೂನಸ್ ವಿರುದ್ಧ ಮಾಜಿ ಪ್ರಧಾನಿ ಹಸೀನಾ ವಾಗ್ದಾಳಿ

IND vs NZ 2nd T20: ಭಾರತಕ್ಕೆ 7 ವಿಕೆಟ್‌ ಗೆಲುವು

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧವೈರಿಗಳು ಒಂದಾಗುವ ಸಾಧ್ಯತೆ?

SCROLL FOR NEXT