ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತ ಬಾಲಕನ ಜೊತೆ ಸರಸವಾಡುತ್ತಿದ್ದ ತಂಗಿಯ ಕತ್ತು ಹಿಸುಕಿ ಕೊಂದ ಅಣ್ಣ: ಆತ್ಮಹತ್ಯೆಯ ಕಥೆ ಕಟ್ಟಿದ ತಾಯಿ!

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಶನಿವಾರ ಅಪ್ರಾಪ್ತ ಬಾಲಕನೊಂದಿಗೆ ಸರಸವಾಡುತ್ತಿದ್ದ 15 ವರ್ಷದ ತನ್ನ ಸಹೋದರಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಶನಿವಾರ ಅಪ್ರಾಪ್ತ ಬಾಲಕನೊಂದಿಗೆ ಸರಸವಾಡುತ್ತಿದ್ದ 15 ವರ್ಷದ ತನ್ನ ಸಹೋದರಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದು ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಲಾಗಿತ್ತು. ಆರೋಪಿ ಮತ್ತು ಆತನ ತಾಯಿ ಕಥೆ ಕಟ್ಟಿ ಹುಡುಗಿ ನೇಣು ಹಾಕಿಕೊಂಡಿದ್ದಾಳೆ ಎಂದು ಹೇಳಿದ್ದರು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸತ್ಯಾಂಶ ಹೊರಬಿದ್ದಿದ್ದು, ಆರೋಪಿ ಹಾಗೂ ಆತನ ತಾಯಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. 

ಇನ್ನು ಸಂತ್ರಸ್ತೆ ಜೊತೆ ಸಿಕ್ಕಿಬಿದ್ದ 16 ವರ್ಷದ ಹುಡುಗನ ಮೇಲೆ ಪೋಸ್ಕೋ ಕಾಯ್ದೆಯಡಿ ಅತ್ಯಾಚಾರದ ಆರೋಪ ದಾಖಲಿಸಲಾಗಿದೆ. ಎಫ್‌ಐಆರ್ ಪ್ರಕಾರ, ಜನವರಿ 31ರಂದು ಕುಟುಂಬಸ್ಥರು ಸಮಾರಂಭವೊಂದರಲ್ಲಿ ಭಾಗವಹಿಸಲು ಹೋಗಿದ್ದರಿಂದ ಹುಡುಗಿ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆ ಬಾಯ್ ಫ್ರೆಂಡ್ ಅನ್ನು ಮನೆಗೆ ಕರೆಸಿಕೊಂಡ ಅಪ್ರಾಪ್ತ ಬಾಲಕಿ ಆತನ ಜೊತೆ ಸರಸವಾಡುತ್ತಿದ್ದಾಗ ಅಚಾನಕ್ ಮನೆಗೆ ಬಂದ ಸಹೋದರನ ಕೈ ಇಬ್ಬರು ಸಿಕ್ಕಿಬಿದ್ದಿದ್ದಾರೆ. 

ಈ ವೇಳೆ ಅಪ್ರಾಪ್ತ ಬಾಲಕನನ್ನು ಹಿಡಿಯಲು ಆರೋಪಿ ಯತ್ನಿಸಿದನು ಆದರೆ ಆತ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕೋಪದಲ್ಲಿದ್ದ ಆರೋಪಿ ತಂಗಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಘಟನೆ ಬಗ್ಗೆ ತನ್ನ ತಾಯಿಗೆ ಹೇಳಿದ್ದಾನೆ. ನಂತರ ಇಬ್ಬರು ಸೇರಿ ಪ್ರಕರಣವನ್ನು ಮುಚ್ಚಿಹಾಕಲು ಆತ್ಮಹತ್ಯೆಯ ಕಥೆ ಕಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT