ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಅಪರಾಧ ತಡೆಯುವ ಬದಲು ಡ್ರಾಮಾ ಮಾಡುತ್ತಿದ್ದಾರೆ: ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರ ವಿರುದ್ಧ ಕೇಜ್ರಿವಾಲ್ ಕಿಡಿ

ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆಂದು ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಕಿಡಿಕಾರಿದ್ದಾರೆ.

ನವದೆಹಲಿ: ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆಂದು ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಕಿಡಿಕಾರಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲು ಕಳೆದ ಎರಡು ದಿನಗಳಿಂದ ದೆಹಲಿ ಪೊಲೀಸ್ ಅಪರಾಧ ದಳದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ,

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ಅಪರಾಧಗಳನ್ನು ನಿಲ್ಲಿಸುವ ಬದಲು  ರಾಜಕೀಯ ಮಾಸ್ಟರ್ ಗಳ ಸೂಚನೆ ಮೇರೆಗೆ ನಾಟಕ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,     ಕ್ರೈಂ ಬ್ರ್ಯಾಂಚ್ ಪೊಲೀಸರನ್ನು ನೋಡಿದರೆ ಅಯ್ಯೋ (ಸಹಾನುಭೂತಿ) ಎನಿಸುತ್ತಿದೆ. ಅವರ ತಪ್ಪಾದರೂ ಏನಿದೆ? ದೆಹಲಿಯಲ್ಲಿ ಅಪರಾಧ ತಡೆಯುವುದು ಅವರ ಜವಾಬ್ದಾರಿ. ಆದರೆ, ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆ. ಹೀಗಾಗಿಯೇ ದೆಹಲಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.

ಯಾವ ಯಾವ ಎಎಪಿ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ನನಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ನಮಗಿಂತಲೂ ಅವರಿಗೆ ಈ ಬಗ್ಗೆ ಹೆಚ್ಚು ತಿಳಿದಿದೆ. ಕೇವಲ ದೆಹಲಿಯಷ್ಟೇ ಅಲ್ಲ, ದೇಶಾದ್ಯಂತ ಕಳೆದ ಕೆಲವು ವರ್ಷಗಳಲ್ಲಿ ಇತರ ಪಕ್ಷಗಳ ಯಾವ ಶಾಸಕರು ಮತ್ತು ಯಾವ ಸರ್ಕಾರಗಳು ಉರುಳಿದವು ಎಂಬುದೂ ಪೊಲೀಸರಿಗೆ ತಿಳಿದಿದೆ. ಹಾಗಿದ್ದರೂ ಈ ನಾಟಕ ಏಕೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ