ರಾಹುಲ್ ಗಾಂಧಿ 
ದೇಶ

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿಯ ಮಿತಿಯನ್ನು ತೆಗೆಯುತ್ತೇವೆ: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವುದಾಗಿ ಮತ್ತು ಮೀಸಲಾತಿ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಂಚಿ: ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವುದಾಗಿ ಮತ್ತು ಮೀಸಲಾತಿ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನಮ್ಮ ಮೊದಲ ಹೆಜ್ಜೆ ದೇಶದಲ್ಲಿ ಜಾತಿ ಗಣತಿ ನಡೆಸುವುದು ಎಂದು ಹೇಳಿದ ರಾಹುಲ್ ಗಾಂಧಿ, ದಲಿತರು, ಆದಿವಾಸಿಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಕಂಪನಿಗಳು, ಆಸ್ಪತ್ರೆಗಳು, ಶಾಲೆ–ಕಾಲೇಜುಗಳು ಮತ್ತು ನ್ಯಾಯಾಲಯಗಳಲ್ಲಿ ಈ ಸಮುದಾಯಗಳ ಭಾಗವಹಿಸುವಿಕೆ ಕಡಿಮೆ ಇದೆ ಎಂದರು.

ಸಿಎಂ ಬುಡಕಟ್ಟು ಜನಾಂಗಕ್ಕೆ ಸೇರಿದವರು ಎಂಬ ಕಾರಣಕ್ಕೆ ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸಿದೆ. ಬಿಜೆಪಿ-ಆರ್‌ಎಸ್‌ಎಸ್ ಪಿತೂರಿಯನ್ನು ಸದೆಬಡಿದು ಬಡವರಿಗಾಗಿ ಸರ್ಕಾರ ರಚಿಸಿರುವ ಮೈತ್ರಿಕೂಟದ ಚಂಪೈ ಸೊರೆನ್ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಅಸ್ತಿತ್ವದಲ್ಲಿರುವ ನಿಬಂಧನೆಗಳ ಅಡಿಯಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ನೀಡಲಾಗುವುದಿಲ್ಲ ಎಂದು ಗಮನಿಸಿದ ಗಾಂಧಿ, ಇಂಡಿಯಾ ಮೈತ್ರಿಕೂಟ ಸರ್ಕಾರವು ಮೀಸಲಾತಿಯ ಮೇಲಿನ 50 ಪ್ರತಿಶತದ ಮಿತಿಯನ್ನು ತೆಗೆದುಹಾಕುತ್ತದೆ ಎಂದು ಭರವಸೆ ನೀಡಿದರು. ದಲಿತರು ಮತ್ತು ಬುಡಕಟ್ಟುಗಳ ಮೀಸಲಾತಿಯಲ್ಲಿ ಯಾವುದೇ ಕಡಿತವಿಲ್ಲ. ಸಮಾಜದ ಹಿಂದುಳಿದ ವರ್ಗಗಳು ಅವರ ಹಕ್ಕುಗಳನ್ನು ಪಡೆಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ದೊಡ್ಡ ಸಮಸ್ಯೆ, ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ತಾವು ಒಬಿಸಿ ಎಂದು ಹೇಳುತ್ತಿದ್ದರು. ಆದರೆ ಜಾತಿ ಗಣತಿಗೆ ಬೇಡಿಕೆ ಬಂದಾಗ ಇಲ್ಲಿ ಎರಡು ಜಾತಿಗಳಿವೆ. ಅದು ಬಡವರು ಮತ್ತು ಶ್ರೀಮಂತರು. ಒಬಿಸಿಗಳು, ದಲಿತರು, ಬುಡಕಟ್ಟು ಜನಾಂಗದವರಿಗೆ ಹಕ್ಕು ನೀಡುವ ಸಮಯ ಬಂದಾಗ ಮೋದಿಯವರು ಜಾತಿ ಇಲ್ಲ ಎಂದು ಹೇಳುತ್ತಾರೆ. ಮತ ಬೇಟೆ ವಿಷಯಕ್ಕೆ ಬಂದಾಗ ತಾವು ಒಬಿಸಿ ಎಂದು ಹೇಳುತ್ತಾರೆ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT