ಪ್ರಧಾನಿ ಮೋದಿ 
ದೇಶ

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ; ಬಿಜೆಪಿ ಸಂಸದರ ಹಾಜರಿ ಕಡ್ಡಾಯ

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನಲೆಲೆಯಲ್ಲಿ ಎಲ್ಲಾ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಬಿಜೆಪಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನಲೆಲೆಯಲ್ಲಿ ಎಲ್ಲಾ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಬಿಜೆಪಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಮೋದಿಯವರು ಇಂದು ಯಾವ ಯಾವ ಅಂಶಗಳ ಬಗ್ಗ ಮಾತನಾಡಲಿದ್ದಾರೆಂಬುದರ ಕುರಿತು ಭಾರೀ ಕುತೂಹಲಗಳು ಮೂಡಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರದ ಅಧಿವೇಶನದ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಮೋದಿ ಸರ್ಕಾರದ 10 ವರ್ಷಗಳ ಸಾಧನೆಯನ್ನು ಶ್ಲಾಘಿಸಿದ್ದರು.

ಇದೀಗ ಮೋದಿಯವರು ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರ ನೀಡಲಿದ್ದಾರೆ. ಈ ವೇಳೆ ಸರ್ಕಾರದ ಸಾಧನೆಗಳನ್ನು ಪ್ರಸ್ತುತಪಡಿಸುವ ಸಾಧ್ಯತೆಗಳಿವೆ ಹಾಗೂ ಚುನಾವಣೆಯ ಕಾರ್ಯಸೂಚಿಯನ್ನು ನಿಗಪಡಿಸುತ್ತಾರೆ.

ಇದರೊಂದಿಗೆ ಮುಂಬರುವ ಚುನಾವಣೋತ್ತರ ಸರ್ಕಾರದ ಅವಧಿಯಲ್ಲಿ ಮಾಡಬೇಕಿರುವ ಕಲೆಸಗಳನ್ನೂ ಪಟ್ಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ, ಆರ್ಥಿಕ ಪ್ರಗತಿ, ರಾಮಮಂದಿರ ಉದ್ಘಾಟನೆ ಸೇರಿದಂತೆ ಅನೇಕ ವಿಷಯಗಳ ವಿಶ್ಲೇಷಣೆ ಮತ್ತು ವಿಪಕ್ಷಗಳ ವಿರುದ್ಧವೂ ಕಿಡಿಕಾರುವ ಸಾಧ್ಯತೆಗಳಿವೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT