ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ - ಗಾಯಾಳು 
ದೇಶ

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಭೂಪಾಲ್: ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು  ಹರ್ದಾ ಕಲೆಕ್ಟರ್ ರಿಷಿ ಗಾರ್ಗ್ ಅವರು ತಿಳಿಸಿದ್ದಾರೆ.

ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ  ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಲು ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿಯ ಕೆನ್ನಾಲಗೆ ಕಾರ್ಖಾನೆ ಒಳಗೆ ಹಾಗೂ ಹೊರಗೆ ವ್ಯಾಪಿಸಿದ್ದು, ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

"ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತದೆ." ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?