ದೇಶ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

Lingaraj Badiger

ಡೆಹ್ರಾಡೂನ್: ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.

ಮಸೂದೆ ಅಂಗೀಕಾರಕ್ಕೂ ಮುನ್ನ ವಿಧಾನಸಭೆಯಲ್ಲಿ ಚರ್ಚೆಯಾಗಲಿದೆ. ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನವನ್ನು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯ ಅಂಗೀಕಾರಕ್ಕಾಗಿಯೇ ಕರೆಯಲಾಗಿದೆ.

ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ಯುಸಿಸಿಯನ್ನು ಅಳವಡಿಸಿಕೊಳ್ಳುವ ದೇಶದ ಮೊದಲ ರಾಜ್ಯವಾಗಲಿದೆ ಮತ್ತು ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.

SCROLL FOR NEXT