ದೇಶ

ಮಧ್ಯಪ್ರದೇಶ ಕಾಂಗ್ರೆಸ್ ಗೆ ಆಘಾತ: ದಿಗ್ವಿಜಯ್ ಸಿಂಗ್ ಆಪ್ತ ಬಿಜೆಪಿ ಸೇರ್ಪಡೆ!

Srinivasamurthy VN

ಭೋಪಾಲ್: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಮರ್ಮಾಘಾತ ಎದುರಾಗಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬುಧವಾರ BJPಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಕಟವರ್ತಿ ಎಂದು ಹೇಳಲಾಗುತ್ತಿರುವ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಸುಮೇರ್ ಸಿಂಗ್ ಅವರು ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಉಪಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷ (BJP)ಕ್ಕೆ ಸೇರ್ಪಡೆಗೊಂಡರು. ಸುಮೇರ್ ಸಿಂಗ್ ಜೊತೆಗೆ, ಅವರ ಪುತ್ರ ಧನಂಜಯ್ ಸಿಂಗ್ ಸೇರಿದಂತೆ ಅವರ ಹಲವಾರು ಬೆಂಬಲಿಗರು ಕೂಡ ಕೇಸರಿ ಪಕ್ಷಕ್ಕೆ ಸೇರಿದ್ದಾರೆ.

ದಿಗ್ವಿಜಯ ಸಿಂಗ್ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಸುಮೇರ್ ಸಿಂಗ್ ಅವರನ್ನು ರಾಜ್ಯ ಲೋಕಸೇವಾ ಆಯೋಗದ (ಪಿಎಸ್‌ಸಿ) ಸದಸ್ಯರನ್ನಾಗಿ ನೇಮಿಸಲಾಗಿತ್ತು. ಅಲ್ಲದೆ ಸುಮೇರ್ ಸಿಂಗ್ ಅವರನ್ನು ದಿಗ್ವಿಜಯ ಸಿಂಗ್ ಅವರ ಕುಟುಂಬದ ಸದಸ್ಯ ಎಂದೇ ಹೇಳಲಾಗುತ್ತಿತ್ತು. 2010-15ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಗುಣಾ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸುಮೇರ್ ಸಿಂಗ್ ಆಯ್ಕೆಯಾಗಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

2020ರಲ್ಲಿ ಬಿಜೆಪಿ ಪಕ್ಷಕ್ಕೆ ಬದಲಾದ ಸಿಂಧಿಯಾ ಅವರ ಸಮ್ಮುಖದಲ್ಲಿ ಗುಣ ಸರ್ಕ್ಯೂಟ್ ಹೌಸ್‌ನಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರಿರುವುದು ವಿಶೇಷವಾಗಿದೆ. 

SCROLL FOR NEXT