ರಾಬ್ರಿ ದೇವಿ(ಸಂಗ್ರಹ ಚಿತ್ರ) 
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ರಾಬ್ರಿ ದೇವಿ ಮತ್ತು ಪುತ್ರಿಯರಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ಗೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ಗೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಚಾರ್ಜ್ ಶೀಟ್‌ನ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಸಮನ್ಸ್ ನೀಡಿತ್ತು. ಮುಂದಿನ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಲಾಗಿದೆ. 

ಪಿಎಂಎಲ್‌ಎ ನ್ಯಾಯಾಲಯವು ಈ ಹಿಂದೆ ಅಮಿತ್ ಕಟ್ಯಾಲ್, ರಾಬ್ರಿ ದೇವಿ,(Rabri Devi) ಮಿಶಾ ಭಾರತಿ, ಹೇಮಾ ಯಾದವ್ ಮತ್ತು ಹೃದಯಾನಂದ್ ಚೌಧರಿ ವಿರುದ್ಧ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.

ರಾಬ್ರಿ ದೇವಿ, ಮಿಸಾ ಭಾರತಿ, ಹೇಮಾ ಯಾದವ್ ನ್ಯಾಯಾಲಯದ ಮುಂದೆ ಇಂದು ವಿಚಾರಣೆಗೆ ಹಾಜರಾದರೆ, ಅಮಿತ್ ಕತ್ಯಾಲ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು.

ಜಾರಿ ನಿರ್ದೇಶನಾಲಯ ಕಳೆದ ಜನವರಿ 1ರಂದು ಅಮಿತ್ ಕತ್ಯಾಲ್, ರಾಬ್ರಿ ದೇವಿ, ಮಿಶಾ ಭಾರತಿ, ಹೇಮಾ ಯಾದವ್, ಹೃದಯಾನಂದ್ ಚೌಧರಿ ಮತ್ತು ಎರಡು ಕಂಪನಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (ಪಿಸಿ) ದಾಖಲಿಸಿತ್ತು. ಎ ಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎ ಬಿ ಎಕ್ಸ್‌ಪೋರ್ಟ್ಸ್ ಪ್ರೈ. ಲಿಮಿಟೆಡ್ ದೆಹಲಿಯ ವಿಶೇಷ ನ್ಯಾಯಾಲಯದ (PMLA) ಮುಂದೆ, ಆಪಾದಿತ ಹಗರಣದಲ್ಲಿ ವಿಚಾರಣೆಯನ್ನು ಎದುರಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT