ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಂಸತ್: ಜಮ್ಮು-ಕಾಶ್ಮೀರಕ್ಕೆ ಸಂಬಂಧಿತ 3 ಮಸೂದೆಗಳು ಅಂಗೀಕಾರ, 4 ಸಮುದಾಯಗಳು ST ಗೆ ಸೇರ್ಪಡೆ

ಜಮ್ಮು-ಕಾಶ್ಮೀರದಲ್ಲಿ ನಾಲ್ಕು ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಗುಂಪಿಗೆ ಸೇರಿಸುವ ಮಸೂದೆ ಸೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ 3 ಮಸೂದೆಗಳನ್ನು ಸಂಸತ್ ನಲ್ಲಿ ಇಂದು ಅಂಗೀಕರಿಸಲಾಯಿತು.

ಸಂಸತ್ ಭವನ
Srinivas Rao BV
Updated On : 9 Feb 2024, 9:03 pm

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ನಾಲ್ಕು ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಗುಂಪಿಗೆ ಸೇರಿಸುವ ಮಸೂದೆ ಸೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ 3 ಮಸೂದೆಗಳನ್ನು ಸಂಸತ್ ನಲ್ಲಿ ಇಂದು ಅಂಗೀಕರಿಸಲಾಯಿತು.

ಪದ್ದಾರಿ, ಪಹರಿ, ಗದ್ದಾ ಬ್ರಾಹ್ಮಣ, ಕೋಲಿ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಪಂಗಡಗಳ ಆದೇಶ (ತಿದ್ದುಪಡಿ) ಮಸೂದೆ, 2024 ಇದಾಗಿದೆ.

ಮೇಲ್ಮನೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಮತ್ತು ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ವ್ಯವಸ್ಥೆ(ತಿದ್ದುಪಡಿ) ಮಸೂದೆ, 2024 ಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಈ ಮಸೂದೆಗಳನ್ನು ಲೋಕಸಭೆಯಲ್ಲಿ ಈ ವಾರ ಅಂಗೀಕರಿಸಲಾಗಿತ್ತು.

Advertisement

Advertisement

ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಕಾನೂನುಗಳ (ತಿದ್ದುಪಡಿ) ಮಸೂದೆ-2024 ಜಮ್ಮು ಮತ್ತು ಕಾಶ್ಮೀರದ ಪಂಚಾಯತ್‌ಗಳು ಮತ್ತು ಪುರಸಭೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಮತ್ತು ಸಂವಿಧಾನದ ನಿಬಂಧನೆಗಳೊಂದಿಗೆ ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಸಂಸ್ಥೆಗಳ ಕಾನೂನುಗಳಲ್ಲಿ ಸ್ಥಿರತೆಯನ್ನು ತರಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಪೊನ್ನಂಪೇಟೆ ಗ್ರಾಮ ಪಂಚಾಯತ್ ಗೆ ಜಮ್ಮು-ಕಾಶ್ಮೀರದ 40 ಜನಪ್ರತಿನಿಧಿಗಳು ಭೇಟಿ, ಅಧ್ಯಯನ

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಚಾಯತ್ ಮತ್ತು ಪುರಸಭೆಗಳಲ್ಲಿ OBC ಗಳಿಗೆ ಸೀಟುಗಳ ಮೀಸಲಾತಿಗೆ ಯಾವುದೇ ನಿಬಂಧನೆ ಇಲ್ಲ.

ಸಂವಿಧಾನ (ಪರಿಶಿಷ್ಟ ಜಾತಿಗಳು) ವ್ಯವಸ್ಥೆ (ತಿದ್ದುಪಡಿ) ಮಸೂದೆ, 2024, ಜಮ್ಮು ಮತ್ತು ಕಾಶ್ಮೀರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ವಾಲ್ಮೀಕಿ ಸಮುದಾಯವನ್ನು ಚುರಾ, ಬಾಲ್ಮೀಕಿ, ಭಂಗಿ ಮತ್ತು ಮೆಹ್ತಾರ್ ಸಮುದಾಯಗಳಿಗೆ ಸಮವಾಗಿ ಸೇರಿಸುತ್ತದೆ.

ಮಸೂದೆಯು 1956 ರ ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ವ್ಯವಸ್ಥೆಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ, ಇದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪರಿಶಿಷ್ಟ ಜಾತಿಗಳೆಂದು ಪರಿಗಣಿಸಲಾದ ಜಾತಿಗಳನ್ನು ಪಟ್ಟಿ ಮಾಡುತ್ತದೆ. ಮೂರು ಮಸೂದೆಗಳನ್ನು ಮೇಲ್ಮನೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಏಕಕಾಲದಲ್ಲಿ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments