ಉದ್ಘಾಟನೆ ವೇಳೆ ಪ್ರಗತಿ ಮೈದಾನ ಸುರಂಗ 
ದೇಶ

ಒಂದೇ ವರ್ಷಕ್ಕೆ ದುರಸ್ಥಿ ಮಾಡಲಾಗದ ಸ್ಥಿತಿ ತಲುಪಿದ ಪ್ರಗತಿ ಮೈದಾನ ಸುರಂಗ: ಇದು ಭ್ರಷ್ಟರ 'ಅಮೃತ ಕಾಲ' ಎಂದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಪ್ರಗತಿ ಮೈದಾನ ಸುರಂಗ ಮಾರ್ಗ ಒಂದೇ ವರ್ಷಕ್ಕೆ ದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದೆ. ಪ್ರಗತಿ ಮೈದಾನದ ಸುರಂಗ ಯೋಜನೆಯಲ್ಲಿ ಭ್ರಷ್ಟರ 'ಅಮೃತ ಕಾಲ' ಮೇಲುಗೈ ಸಾಧಿಸುತ್ತಿದೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಪ್ರಗತಿ ಮೈದಾನ ಸುರಂಗ ಮಾರ್ಗ ಒಂದೇ ವರ್ಷಕ್ಕೆ ದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದೆ. ಪ್ರಗತಿ ಮೈದಾನದ ಸುರಂಗ ಯೋಜನೆಯಲ್ಲಿ ಭ್ರಷ್ಟರ 'ಅಮೃತ ಕಾಲ' ಮೇಲುಗೈ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 19, 2022 ರಂದು, ಕೇಂದ್ರ ದೆಹಲಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್ ನ ಉಪನಗರಗಳನ್ನು ಸಂಪರ್ಕಿಸುವ 1.3 ಕಿಮೀ ಉದ್ದದ ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯನ್ನು ಉದ್ಘಾಟಿಸಿದ್ದರು.

ಈ ಕುರಿತು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, "ದೇಶದಲ್ಲಿ ಭ್ರಷ್ಟರ 'ಅಮೃತ ಕಾಲ' ಮೇಲುಗೈ ಸಾಧಿಸುತ್ತಿದೆ" ಎಂದು ಹೇಳಿದ್ದಾರೆ.

777 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪ್ರಗತಿ ಮೈದಾನದ ಸುರಂಗ ಮಾರ್ಗ ಕೇವಲ ಒಂದೇ ವರ್ಷದಲ್ಲಿ ನಿರುಪಯುಕ್ತವಾಗಿದೆ. ಪ್ರಧಾನಿ ಪ್ರತಿ ಅಭಿವೃದ್ಧಿ ಯೋಜನೆಗೆ ‘ಪ್ಲಾನಿಂಗ್’ ಮಾಡುವ ಬದಲು ‘ಮಾಡೆಲಿಂಗ್’ ಮಾಡುತ್ತಿದ್ದಾರೆ’’ ಎಂದು ಟೀಕಿಸಿದ್ದಾರೆ.

"ಇಡಿ, ಸಿಬಿಐ, ಐಟಿ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿಲ್ಲ. ಆದರೆ ಪ್ರಜಾಪ್ರಭುತ್ವದ ವಿರುದ್ಧ ಹೋರಾಡುತ್ತಿವೆ" ಎಂದು ಆರೋಪಿಸಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಸುರಂಗದ ಉದ್ಘಾಟನೆಯ ನಂತರ ಪ್ರಧಾನಿ ಮೋದಿಯವರ ಫೋಟೋವನ್ನು ಹಂಚಿಕೊಂಡಿದ್ದಾರೆ.

ಪ್ರಗತಿ ಮೈದಾನ ಸುರಂಗ ಮಾರ್ಗ ದುರಸ್ತಿ ಮಾಡಲಾಗದ ಮಟ್ಟಿಗೆ ಹದಗೆಟ್ಟಿದೆ. ಈ ಸುರಂಗವನ್ನು ಈಗಿನ ಸ್ಥಿತಿಯಲ್ಲಿ ದುರಸ್ತಿ ಮಾಡುವುದು ಸಾಧ್ಯವಿಲ್ಲ. ಇದನ್ನು ಸಂಪೂರ್ಣವಾಗಿ ಬದಲಿಸಬೇಕಿದೆ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!