ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಲ್ಮಾನ್ ಖುರ್ಷಿದ್ ಪತ್ನಿಗೆ ಇಡಿ ಸಮನ್ಸ್

Lingaraj Badiger

ಲಖನೌ: ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ಅವರಿಗೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್ ಜಾರಿ ಮಾಡಿದ್ದು, ಫೆಬ್ರವರಿ 15 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಫೆಬ್ರವರಿ 15 ರಂದು ಲಖನೌನ ಇಡಿ ವಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಲೂಯಿಸ್ ಖುರ್ಷಿದ್ ಅವರಿಗೆ ಸೂಚಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಎರಡು ದಿನಗಳ ಹಿಂದೆ, ಉತ್ತರ ಪ್ರದೇಶದ ಬರೇಲಿಯಲ್ಲಿರುವ ಸಂಸದ-ಶಾಸಕರ ನ್ಯಾಯಾಲಯ, ಇದೇ ಪ್ರಕರಣ ಸಂಬಂಧ ಲೂಯಿಸ್ ಖುರ್ಷಿದ್ ಮತ್ತು ಇನ್ನೊಬ್ಬ ಆರೋಪಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು ಮತ್ತು ಫೆಬ್ರವರಿ 16 ರಂದು ಮುಂದಿನ ವಿಚಾರಣೆ ನಿಗದಿಪಡಿಸಿದೆ.

2009-10ರಲ್ಲಿ, ಖುರ್ಷಿದ್ ಮತ್ತು ಅವರ ಪತ್ನಿ ಲೂಯಿಸ್ ಖುರ್ಷಿದ್ ಅಧ್ಯಕ್ಷರಾಗಿರುವ ಟ್ರಸ್ಟ್ ಒಂದರ ಕೃತಕ ಕೈ-ಕಾಲುಗಳು ಮತ್ತು ಇತರ ಸಲಕರಣೆಗಳ ವಿತರಣೆ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಸಲ್ಮಾನ್ ಖುರ್ಷಿದ್ ಅವರು ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

SCROLL FOR NEXT