ಅಮಿತ್ ಶಾ 
ದೇಶ

ಲೋಕಸಭೆ ಚುನಾವಣೆ ಮುನ್ನ ಸಿಎಎ ಜಾರಿ, NDA 400ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತ: ಅಮಿತ್ ಶಾ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಅಚ್ಚರಿಯಿಲ್ಲ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮತ್ತೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾಗುತ್ತದೆ ಎಂದು ಈಗಾಗಲೇ ಮನವರಿಕೆ ಮಾಡಿಕೊಂಡಿವೆ ಎಂದು ಹೇಳಿದರು. 

ನಾವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ, (ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು) ಜನತೆಗೆ ಕೊಟ್ಟ ಮಾತುಗಳನ್ನು ಈಡೇರಿಸಿದ್ದೇವೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಅಮಿತ್ ಶಾ "ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024ನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು. 

ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (RLD), ಶಿರೋಮಣಿ ಅಕಾಲಿದಳ (SAD) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ಗೆ ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ನಮಗೆ ಕುಟುಂಬ ಯೋಜನೆಯಲ್ಲಿ ನಂಬಿಕೆ ಇದೆ ಆದರೆ ರಾಜಕೀಯದಲ್ಲಿ ಅಲ್ಲ ಎಂದು ಮುಂಬರುವ ದಿನಗಳಲ್ಲಿ ಇನ್ನಷ್ಟು ಪಕ್ಷಗಳು ಎನ್ ಡಿಎ ಒಕ್ಕೂಟಕ್ಕೆ ಸೇರುವ ಸುಳಿವನ್ನು ನೀಡಿದರು. 

ಅಭಿವೃದ್ಧಿ v/s ಘೋಷಣೆ ನಡುವಿನ ಹೋರಾಟ: 2024 ರ ಚುನಾವಣೆಯು ಎನ್‌ಡಿಎ ಮತ್ತು ವಿರೋಧ ಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ, ದೇಶದ ಒಟ್ಟಾರೆ ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಹಣಾಹಣಿಯಾಗಿರುತ್ತದೆ ಎಂದು ಅಮಿತ್ ಶಾ ವ್ಯಾಖ್ಯಾನಿಸಿದರು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಕೇಳಿದ ಪ್ರಶ್ನೆಗೆ, 1947 ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾದ ಕಾರಣ ನೆಹರು-ಗಾಂಧಿ ವಂಶಸ್ಥರಿಗೆ ಅಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದರು. 

ಶ್ವೇತಪತ್ರಕ್ಕೆ ಇದು ಸರಿಯಾದ ಸಮಯ: ಸಂಸತ್ತಿನಲ್ಲಿ ಸರ್ಕಾರವು ಮಂಡಿಸಿದ ಶ್ವೇತಪತ್ರದ ಕುರಿತು ಮಾತನಾಡಿದ ಶಾ, 2014 ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಮೈತ್ರಿ (UPA) ಯಾವ ಗೊಂದಲವನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ ಎಂದು ಹೇಳಿದರು.

2014ರಲ್ಲಿ ದೇಶದ ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು, ಎಲ್ಲೆಡೆ ಹಗರಣಗಳು ನಡೆಯುತ್ತಿದ್ದವು, ವಿದೇಶಿ ಹೂಡಿಕೆ ಬರುತ್ತಿರಲಿಲ್ಲ, ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು. ಆದರೆ 10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ, ವಿದೇಶಿ ಹೂಡಿಕೆಯನ್ನು ತಂದಿದೆ, ಯಾವುದೇ ಭ್ರಷ್ಟಾಚಾರವಿಲ್ಲ, ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದು ಅವರು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಾತನಾಡಿದ ಗೃಹ ಸಚಿವರು, ರಾಮನ ಜನ್ಮ ಸ್ಥಳದಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎಂದು ದೇಶದ ಜನತೆ 500 ವರ್ಷಗಳಿಂದ ಬಯಸಿದ್ದರು. ಆದರೆ, ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿರಲಿಲ್ಲ, ಇಂದು ಅದು ಈಡೇರಿದೆ ಎಂದರು. 

ಲೋಕಸಭೆ ಚುನಾವಣೆ ಮುನ್ನ ಸಿಎಎ ಜಾರಿ: ಪೌರತ್ವ ತಿದ್ದುಪಡಿ ಕಾಯಿದೆ (CAA) ಕುರಿತು, 2019 ರಲ್ಲಿ ಜಾರಿಗೊಳಿಸಲಾದ ಕಾನೂನನ್ನು ನಿಯಮಗಳನ್ನು ಹೊರಡಿಸಿದ ನಂತರ ಲೋಕಸಭೆ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು. 

ನಮ್ಮ ದೇಶದ ಮುಸಲ್ಮಾನ ಸಹೋದರರನ್ನು ಈ ವಿಷಯದಲ್ಲಿ ಪ್ರಚೋದಿಸಿ ದಾರಿತಪ್ಪಿಸಲಾಗುತ್ತಿದೆ. ಸಿಎಎ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳಲು ಇರುವುದಲ್ಲ ಎಂದು ಸ್ಪಷ್ಟಪಡಿಸಿದರು. 

ಏಕರೂಪ ನಾಗರಿಕ ಸಂಹಿತೆಯ ಕುರಿತು, ಇದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ. ಆದರೆ ಕಾಂಗ್ರೆಸ್ ತುಷ್ಟೀಕರಣದ ಕಾರಣದಿಂದ ಅದನ್ನು ನಿರ್ಲಕ್ಷಿಸಿದೆ. ಉತ್ತರಾಖಂಡದಲ್ಲಿ ಯುಸಿಸಿ ಜಾರಿ ಸಾಮಾಜಿಕ ಬದಲಾವಣೆಯಾಗಿದೆ. ಇದನ್ನು ಎಲ್ಲಾ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಮತ್ತು ಕಾನೂನು ಪರಿಶೀಲನೆ ಎದುರಿಸಬೇಕಾಗುತ್ತದೆ. ಜಾತ್ಯತೀತ ದೇಶವು ಧರ್ಮ ಆಧಾರಿತ ನಾಗರಿಕ ಸಂಹಿತೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT