ರೈತರ ಪ್ರತಿಭಟನೆಗೆ ಪೊಲೀಸರಿಂದ ಸಕಲ ಸಿದ್ಧತೆ 
ದೇಶ

'ದೆಹಲಿ ಚಲೋ' ರೈತರ ಪ್ರತಿಭಟನೆ: ಮಾರ್ಚ್ 12ರವರೆಗೆ ನಿಷೇಧಾಜ್ಞೆ, ವಾಹನ ತಡೆಯಲು ಕಾಂಕ್ರಿಟ್ ತಡೆಗೋಡೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ನಾಳೆ ಅಂದರೆ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಧಾನಿಯ ದೆಹಲಿಯ ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ನಾಳೆ ಅಂದರೆ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಧಾನಿಯ ದೆಹಲಿಯ ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ದೆಹಲಿಯ ಸಿಂಘು, ಘಾಜಿಪುರ್‌ ಮತ್ತು ಟಿಕ್ರಿ ಗಡಿ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಿ, ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರತಿಭಟನಾಕಾರರು ಬರುವ ವಾಹನಗಳು ನಗರವನ್ನು ಪ್ರವೇಶಿಸದಂತೆ ತಡೆಯಲು ಕಾಂಕ್ರಿಟ್‌ ತಡೆಗೋಡೆ ಮತ್ತು ಕಬ್ಬಿಣದ ಮೊಳೆಗಳನ್ನು ರಸ್ತೆಗಳಲ್ಲಿ ಅಳವಡಿಸಲಾಗಿದೆ. ಈಗಾಗಲೇ ಬಿಡುಗಡೆ ಮಾಡಲಾಗಿರುವ ಸಂಚಾರ ಮಾರ್ಗಸೂಚಿ ಪ್ರಕಾರ, ಸಿಂಘು ಗಡಿಯಲ್ಲಿ ವಾಣಿಜ್ಯ ವಾಹನಗಳ ಸಂಚಾರದ ಮೇಲೆ ಸೋಮವಾರದಿಂದಲೇ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧ ಮಂಗಳವಾರ ಎಲ್ಲ ಮಾದರಿಯ ವಾಹನಗಳಿಗೂ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಸುಮಾರು 5,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ರಸ್ತೆ ಬಂದ್‌ ಮಾಡುವುದಕ್ಕೆ ದೊಡ್ಡದೊಡ್ಡ ಕಂಟೇನರ್‌ಗಳನ್ನು ಮತ್ತು ಕಾಂಕ್ರಿಟ್‌ ತಡೆಗೋಡೆ ಸಾಗಿಸಲು ಕ್ರೇನ್‌ಗಳನ್ನು ನಿಯೋಜಿಸಲಾಗಿದೆ. ರೈತರು ರಾಜಧಾನಿ ಪ್ರವೇಶಿಸದಂತೆ ನೋಡಿಕೊಳ್ಳಲು ಈಗಾಗಲೇ ಬಹುಪದರ ಬ್ಯಾರಿಕೇಡ್‌ಗಳು, ಮುಳ್ಳುತಂತಿಗಳನ್ನು ಅಳವಡಿಸಲಾಗಿದೆ. ಏತನ್ಮಧ್ಯೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈಶಾನ್ಯ ದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಪೊಲೀಸ್‌ ಕಮಿಷನರ್‌ ಸಂಜಯ್‌ ಅರೋರಾ ಅವರು, ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗಿನ ನಗರದ ಗಡಿ ಪ್ರದೇಶಗಳಿಗೆ ಭಾನುವಾರವೇ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯ ಪರಿಶೀಲನೆ ನಡೆಸಿದ್ದಾರೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜ್ದೂರ್‌ ಮೋರ್ಚಾ ‘ದೆಹಲಿ ಚಲೊ’ಗೆ ಕರೆ ನೀಡಿವೆ. ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ.

ಸೆಕ್ಷನ್ 144 ಜಾರಿ, ತುರ್ತು ಬಂಧನಕ್ಕೆ ಆದೇಶ
ಫೆಬ್ರವರಿ 13 ರಂದು ನಡೆಯಲಿರುವ 'ದೆಹಲಿ ಚಲೋ' ಮಾರ್ಚ್‌ಗೆ ಮುನ್ನ ಮುಂದಿನ 30 ದಿನಗಳ ಕಾಲ ಇಡೀ ದೆಹಲಿ ನಗರದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಸೋಮವಾರ ಆದೇಶ ಹೊರಡಿಸಿದ್ದು, ಆದೇಶವನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ತಕ್ಷಣವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

"ದೆಹಲಿಯ ಭೌಗೋಳಿಕ ಮಿತಿಗಳಲ್ಲಿ ರಾಜಕೀಯ, ಸಾಮಾಜಿಕ, ಅಥವಾ ಯಾವುದೇ ಇತರ ಉದ್ದೇಶಕ್ಕಾಗಿ ಯಾವುದೇ ಮೆರವಣಿಗೆಗಳು, ಪ್ರದರ್ಶನಗಳು, ರ್ಯಾಲಿಗಳು ಅಥವಾ ಕಾಲ್ನಡಿಗೆಯಲ್ಲಿ ಮೆರವಣಿಗೆ, ಸಮಾವೇಶ, ಅಥವಾ ಭಾಗವಹಿಸುವಿಕೆಯ ಮೇಲೆ ಸಂಪೂರ್ಣ ನಿಷೇಧವಿರುತ್ತದೆ." ಆದೇಶದಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೇಲ್ವಿಚಾರಣೆ
ಏತನ್ಮಧ್ಯೆ, ಡಿಸಿಪಿ (ನಾರ್ತ್ ಈಸ್ಟ್) ಜಾಯ್ ಟಿರ್ಕಿ ಅವರು ಇದೇ ವಿಚಾರವಾಗಿ ಮಾತನಾಡಿದ್ದು, 'ಸಾಮಾಜಿಕ ಮಾಧ್ಯಮ ಸೇರಿದಂತೆ ಎಲ್ಲವನ್ನೂ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಾವು ಸಾಮಾಜಿಕ ಮಾಧ್ಯಮ ಮತ್ತು ನಾವು ಸ್ವೀಕರಿಸುತ್ತಿರುವ ಇನ್‌ಪುಟ್‌ಗಳು ಸೇರಿದಂತೆ ಎಲ್ಲವನ್ನೂ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ನಾವು ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಮುಂಜಾಗ್ರತ್ರಾ ಕ್ರಮವಾಗಿ ಪೋರ್ಟರ್‌ಗಳನ್ನು ನಿಯೋಜಿಸಿದ್ದೇವೆ. ಇವುಗಳ ಲೈವ್ ಮಾಹಿತಿಯನ್ನು ನಾವು ಪಡೆಯುತ್ತಿದ್ದೇವೆ. ಮಾಹಿತಿ ಪ್ರಕಾರ, ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸ್ವಲ್ಪ ಒತ್ತಡವಿರುತ್ತದೆ... ವಿವರವಾದ ವ್ಯವಸ್ಥೆಯನ್ನು ಹೊರಡಿಸಲಾಗಿದೆ. ಗಡಿ ಪರಿಶೀಲನೆಯು ಬಹು-ಪದರವಾಗಿರುತ್ತದೆ. ನಾವು ವಾಹನಗಳು, ಜೆಸಿ ಬ್ಯಾರಿಕೇಡ್ಗಳು ಮತ್ತು ಕಬ್ಬಿಣದ ಬ್ಯಾರಿಕೇಡ್ಗಳನ್ನು ಬಳಸುತ್ತಿದ್ದೇವೆ. ನಾನೂ ಕೂಡ 144 ಸೆಕ್ಷನ್ ಜಾರಿ ಮಾಡಿರುವುದಾಗಿ ನೋಟಿಸ್ ನೀಡಿದ್ದೇನೆ. ನಾಳೆ ನಡೆಯಲಿರುವ 'ದೆಹಲಿ ಚಲೋ' ಮೆರವಣಿಗೆಗೆ ನಾವು ಸಿದ್ಧರಾಗುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT