ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಚೆನ್ನೈ: ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆ

ಕಳೆದ ವರ್ಷ ಬಿಜೆಪಿ ಜೊತೆಗಿನ ಸಂಬಂಧ ಮುರಿದುಕೊಂಡಿದ್ದ ಜನಪ್ರಿಯ ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.

ನಟಿ ಗೌತಮಿ
Nagaraja AB
Updated On : 14 Feb 2024, 11:49 pm

ಚೆನ್ನೈ: ಕಳೆದ ವರ್ಷ ಬಿಜೆಪಿ ಜೊತೆಗಿನ ಸಂಬಂಧ ಮುರಿದುಕೊಂಡಿದ್ದ ಜನಪ್ರಿಯ ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.

ಬುಧವಾರ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗುವ ಮೂಲಕ ತಮಿಳುನಾಡಿನ ಪ್ರಮುಖ ವಿರೋಧ ಪಕ್ಷಕ್ಕೆ ಔಪಚಾರಿಕವಾಗಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ 

Advertisement

Advertisement

55 ವರ್ಷ ವಯಸ್ಸಿನ ನಟಿ, 120 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ರಜನಿಕಾಂತ್ , ಕಮಲ್ ಹಾಸನ್ ಅವರಂತಹ ಟಾಪ್ ಸ್ಟಾರ್‌ಗಳೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಅವರು 25 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ ಅಕ್ಟೋಬರ್ 2023 ರಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಗೌತಮಿ ಅವರು ಮಾಜಿ ಮುಖ್ಯಮಂತ್ರಿ ಪಳನಿಸ್ವಾಮಿ ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಔಪಚಾರಿಕವಾಗಿ ಎಐಎಡಿಎಂಕೆಗೆ ಸೇರಿದ್ದಾರೆ ಎಂದು ಹೇಳಿಕೆಯಲ್ಲಿ  ತಿಳಿಸಲಾಗಿದೆ. 

"ಜನರ ಕಲ್ಯಾಣಕ್ಕಾಗಿ ಹೋರಾಡಲು ಎಲ್ಲರನ್ನೂ ಒಗ್ಗೂಡಿಸುವ ಸಾಮರ್ಥ್ಯಕ್ಕಾಗಿ ಅಣ್ಣನ್ (ತಮಿಳಿನಲ್ಲಿ ಹಿರಿಯ ಸಹೋದರ) ಅವರಿಂದ ನಾನು ಪ್ರಭಾವಿತನಾಗಿದ್ದೆ. ಇಂದು ನಾನು ಪಕ್ಷಕ್ಕೆ ಸೇರಲು ತುಂಬಾ ಸಂತೋಷವಾಗಿದೆ. ಎಐಎಡಿಎಂಕೆಗೆ ಸೇರುವ ಮೂಲಕ ನಾನು ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ ಎಂದು  ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments