ಮಹಾ ಡಿಸಿಎಂ ಅಜಿತ್ ಪವಾರ್
ಮಹಾ ಡಿಸಿಎಂ ಅಜಿತ್ ಪವಾರ್ 
ದೇಶ

ಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ: ಮಹಾರಾಷ್ಟ್ರ ಸ್ಪೀಕರ್ ನಾರ್ವೇಕರ್ ಆದೇಶ

Lingaraj Badiger

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಗುರುವಾರ ಆದೇಶ ಪ್ರಕಟಿಸಿದ್ದಾರೆ.

ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 15ರೊಳಗೆ ನಿರ್ಧಾರ ಕೈಗೊಳ್ಳುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ತಮ್ಮ ನಿರ್ಧಾರ ಪ್ರಕಟಿಸಿರುವ ಸ್ವೀಕರ್ ನಾರ್ವೇಕರ್ ಅವರು, "ಶಾಸಕರ ಅನರ್ಹತೆ ಕೋರಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಲಾಗಿದೆ" ಎಂದು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಬಣಗಳು ಸಲ್ಲಿಸಿದ ಅನರ್ಹತೆ ಅರ್ಜಿಗಳ ಕುರಿತು ಇಂದು ಸಂಜೆ ತೀರ್ಪು ಪ್ರಕಟಿಸಿದ ನಾರ್ವೇಕರ್ ಅವರು, ಅಜಿತ್ ಪವಾರ್ ಬಣ ನಿಜವಾದ ಎನ್ ಸಿಪಿ ಎಂದು ಹೇಳಿದ್ದಾರೆ.

ಎನ್‌ಸಿಪಿಯಿಂದ ದೂರ ಸರಿದು ಬಿಜೆಪಿ-ಶಿವಸೇನಾ (ಏಕನಾಥ್ ಶಿಂಧೆ) ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿರುವ ಅಜಿತ್ ಪವಾರ್ ಮತ್ತು ಇತರ 8 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿತ್ತು.

ಇನ್ನು ಕೇಂದ್ರ ಚುನಾವಣಾ ಆಯೋಗ ಫೆಬ್ರವರಿ 6ರಂದು ಅಜಿತ್ ಪವಾರ್ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಎಂದು ಪರಿಗಣಿಸಿತ್ತು ಹಾಗೂ ಗಡಿಯಾರದ ಚಿಹ್ನೆಯನ್ನು ಮಂಜೂರು ಮಾಡಿತ್ತು.

SCROLL FOR NEXT