ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ
ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ 
ದೇಶ

ಫೆಮಾ ಉಲ್ಲಂಘನೆ ಪ್ರಕರಣ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್

Lingaraj Badiger

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ನಾಯಕಿ ಹಾಗೂ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

49 ವರ್ಷದ ರಾಜಕಾರಣಿಗೆ ಫೆಬ್ರವರಿ 19 ರಂದು ದೆಹಲಿಯ ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ(FEMA) ನಿಬಂಧನೆಗಳ ಅಡಿಯಲ್ಲಿ ಟಿಎಂಸಿ ಮಾಜಿ ಸಂಸದೆಯ ಹೇಳಿಕೆಯನ್ನು ದಾಖಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಲೋಕಪಾಲದ ಉಲ್ಲೇಖದ ಮೇಲೆ ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಸಿಬಿಐ ಸಹ ಪ್ರಾಥಮಿಕ ತನಿಖೆ ನಡೆಸುತ್ತಿದೆ.

ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸಲಾಗಿದೆ.

ಮೊಯಿತ್ರಾ ಅವರು ಹಣಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದಾರೆ.

SCROLL FOR NEXT