ಪ್ರಧಾನಿ ಮೋದಿ PTI
ದೇಶ

ಬಿಜೆಪಿ 370 ಸ್ಥಾನ ಗೆಲ್ಲುವುದು ಶ್ಯಾಮ ಪ್ರಸಾದ್ ಮುಖರ್ಜಿಗೆ ಸಲ್ಲಿಸುವ ನಿಜವಾದ ಗೌರವ: ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಡವರು, ದೇಶದ ಅಭಿವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಗೌರವ ಸ್ಥಾನಮಾನ ಹೆಚ್ಚಳದ ಸುತ್ತ ಪ್ರಚಾರ ನಡೆಸುವಂತೆ ಪಕ್ಷದ ಸದಸ್ಯರಿಗೆ ಶನಿವಾರ ಸೂಚಿಸಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಡವರು, ದೇಶದ ಅಭಿವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಗೌರವ ಸ್ಥಾನಮಾನ ಹೆಚ್ಚಳದ ಸುತ್ತ ಪ್ರಚಾರ ನಡೆಸುವಂತೆ ಪಕ್ಷದ ಸದಸ್ಯರಿಗೆ ಶನಿವಾರ ಸೂಚಿಸಿದ್ದಾರೆ. ಮುಖರ್ಜಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಹಕ್ಕುಗಳನ್ನು ನೀಡುವ 370 ನೇ ವಿಧಿಯ ಕಟುವಾದ ವಿರೋಧಿಯಾಗಿದ್ದರು. ಮೋದಿ ಸರ್ಕಾರ ಆಗಸ್ಟ್ 2019 ರಲ್ಲಿ ಆ ವಿಧಿಯನ್ನು ರದ್ದುಗೊಳಿಸಿತು.

ಪಕ್ಷದ ಸಮಾವೇಶ ಆರಂಭಕ್ಕೂ ಮುನ್ನಾ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಯೊಬ್ಬ ಬೂತ್ ಕಾರ್ಯಕರ್ತರು ಈಗ ಮತಗಟ್ಟೆಗಳತ್ತ ಗಮನ ಹರಿಸಬೇಕು ಮತ್ತು ಚುನಾವಣೆಯಲ್ಲಿ ಪಕ್ಷಕ್ಕೆ ಕನಿಷ್ಠ 370 ಮತಗಳನ್ನು ಗಳಿಸುವಂತೆ ನೋಡಿಕೊಳ್ಳಬೇಕು ಎಂದರು.

ಮೋದಿ ಭಾಷಣದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಚುನಾವಣೆಯ ಸಮಯದಲ್ಲಿ ಪ್ರತಿಪಕ್ಷಗಳು ಅನಗತ್ಯ ಮತ್ತು ಭಾವನಾತ್ಮಕ ವಿಷಯಗಳನ್ನು ಎತ್ತುತ್ತವೆ ಆದರೆ ಪಕ್ಷದ ಸದಸ್ಯರು ಅಭಿವೃದ್ಧಿ, ಬಡವರ ಪರ ನೀತಿಗಳು ಮತ್ತು ವಿದೇಶದಲ್ಲಿ ದೇಶದ ಗೌರವ ಸ್ಥಾನಮಾನ ಹೆಚ್ಚಳ ವಿಚಾರದತ್ತ ಅಂಟಿಕೊಳ್ಳಬೇಕು ಎಂದು ಪ್ರಧಾನಿ ಸಭೆಯಲ್ಲಿ ಹೇಳಿದ್ದಾಗಿ ತಿಳಿಸಿದರು. ಫೆಬ್ರವರಿ 25 ರಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ತಲುಪಲು ಪಕ್ಷವು ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ತಾವ್ಡೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ