ರಾಮಭದ್ರಾಚಾರ್ಯ - ಕವಿ ಗುಲ್ಜಾರ್  
ದೇಶ

ಖ್ಯಾತ ಉರ್ದು ಕವಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ

ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ

ನವದೆಹಲಿ: ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.

ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ಸಿನಿಮಾ ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ ಮತ್ತು ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಅವರು ಒಬ್ಬರು ಎಂದು ಪರಿಗಣಿಸಲಾಗಿದೆ.

ಗುಲ್ಜಾರ್ ಅವರು ಈ ಹಿಂದೆ 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇನ್ನು ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞ ಮತ್ತು 100ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.

"ಸಂಸ್ಕೃತ ಸಾಹಿತಿ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಪ್ರಸಿದ್ಧ ಉರ್ದು ಸಾಹಿತಿ ಗುಲ್ಜಾರ್ ಎಂಬ ಎರಡು ಭಾಷೆಗಳ ಖ್ಯಾತ ಬರಹಗಾರರಿಗೆ (2023 ಕ್ಕೆ) ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ಶೇ.10ರಷ್ಟು ಸುಂಕ ಘೋಷಿಸಿದ Donald Trump; ಭಾರತದ ಮೇಲೆ ಪರಿಣಾಮವೇನು?

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump, ಭಾರತ ಒಪ್ಪಂದ ವಿಷಯ ಪ್ರಸ್ತಾಪ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆ.26ವರೆಗೆ ನ್ಯಾಯಾಂಗ ಬಂಧನ

ಶ್ರೀನಗರ: ಸಿಆರ್​​ಪಿಎಫ್​ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ

T20 ವಿಶ್ವಕಪ್ 2026: 'ಸಣ್ಣ-ಪುಟ್ಟ ತಂಡಗಳ ವಿರುದ್ಧ ಗೆಲ್ಲೋದಲ್ಲ.. ಭಾರತದ ಮುಖವಾಡ ಕಳಚುತ್ತೇವೆ': ಆಫ್ರಿಕಾ ಕೋಚ್ Shukri Conrad

SCROLL FOR NEXT