ರೈತರ ಪ್ರತಿಭಟನೆ
ರೈತರ ಪ್ರತಿಭಟನೆ PTI
ದೇಶ

ರೈತರ ಪ್ರತಿಭಟನೆ: ಪಂಜಾಬ್‌ನಲ್ಲಿ ಫೆ.24ರವರೆಗೆ ಇಂಟರ್‌ನೆಟ್ ಸೇವೆ ಸ್ಥಗಿತ!

Nagaraja AB

ಚಂಡೀಗಢ: ರೈತರ ‘ದೆಹಲಿ ಚಲೋ’ ಜಾಥಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಟಿಯಾಲ, ಸಂಗ್ರೂರ್ ಮತ್ತು ಫತೇಘರ್ ಸಾಹಿಬ್ ಸೇರಿದಂತೆ ಕೆಲವು ಪಂಜಾಬ್ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂಟರ್ ನೆಟ್ ಸೇವೆಗಳ ಸ್ಥಗಿತವನ್ನು ಫೆಬ್ರವರಿ 24 ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಫೆಬ್ರವರಿ 12 ರಿಂದ 16 ರವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

ಕೇಂದ್ರ ಗೃಹ ಸಚಿವಾಲಯದ ಫೆಬ್ರವರಿ 16 ರ ಆದೇಶದ ಪ್ರಕಾರ, ಪಟಿಯಾಲಾದ ಶಂಭು, ಜುಲ್ಕನ್, ಪಾಸಿಯನ್, ಪತ್ರಾನ್, ಶತ್ರನಾ, ಸಮನಾ, ಘನೌರ್, ದೇವಿಗಢ್ ಮತ್ತು ಬಲ್ಭೇರಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ; ಮೊಹಾಲಿಯ ಲಾಲ್ರು ಪೊಲೀಸ್ ಠಾಣೆ; ಬಟಿಂಡಾದ ಸಂಗತ್ ಪೊಲೀಸ್ ಠಾಣೆ, ಫತೇಘರ್ ಸಾಹಿಬ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಲಾಗಿದೆ.

ಪಂಜಾಬ್‌ನ ಈ ಪ್ರದೇಶಗಳಲ್ಲಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಕೇಂದ್ರವು 1885 ರ ಟೆಲಿಗ್ರಾಫ್ ಆಕ್ಟ್ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಫೆಬ್ರವರಿ 15 ರಂದು ಚಂಡೀಗಢದಲ್ಲಿ ಮೂವರು ಕೇಂದ್ರ ಸಚಿವರು ಮತ್ತು ರೈತ ಮುಖಂಡರ ನಡುವೆ ನಡೆದ ಸಭೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ವಿಷಯ ಪ್ರಸ್ತಾಪಿಸಿದ್ದರು.

SCROLL FOR NEXT