ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂಗ್ರಹ ಚಿತ್ರ
ದೇಶ

ದೇಶದ ಜನಪ್ರಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಗೆ 2ನೇ ಸ್ಥಾನ, ಮೊದಲನೆಯವರು ಯಾರು ಗೊತ್ತಾ?

ದೇಶದ ಜನಪ್ರಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಗೆ 2ನೇ ಸ್ಥಾನ ಲಭಿಸಿದೆ.

ನವದೆಹಲಿ: ದೇಶದ ಜನಪ್ರಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಗೆ 2ನೇ ಸ್ಥಾನ ಲಭಿಸಿದೆ.

ಹೌದು.. ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ ದೇಶದ ಜನಪ್ರಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಗೆ 2ನೇ ಸ್ಥಾನ ಪಡೆದಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದೇಶದ ಜನಪ್ರಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ.

ಈ ಸಮೀಕ್ಷೆಯು ದೇಶದ ಮುಖ್ಯಮಂತ್ರಿಗಳ ಜನಪ್ರಿಯತೆಯನ್ನು ಅಳೆಯುವ ಗುರಿಯನ್ನು ಹೊಂದಿದ್ದು, ಕೆಲವು ಕುತೂಹಲಕಾರಿ ಅಂಶಗಳನ್ನು ಅನಾವರಣಗೊಳಿಸಿದೆ. ಒಡಿಶಾದ ಸಿಎಂ ಪಟ್ನಾಯಕ್ ಅವರು ಶೇ. 52.7 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಶೇ. 51.3 ರೇಟಿಂಗ್‌ನೊಂದಿಗೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ.

ಶೇ 48.6 ರೇಟಿಂಗ್‌ನೊಂದಿಗೆ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮೂರನೇ ಸ್ಥಾನದಲ್ಲಿದ್ದರೆ, ಶೇ 42.6 ರೇಟಿಂಗ್‌ನೊಂದಿಗೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಶೇ 41.4 ರೇಟಿಂಗ್‌ನೊಂದಿಗೆ ತ್ರಿಪುರಾ ಮುಖ್ಯಮಂತ್ರಿ ಡಾ.ಮಾಣಿಕ್ ಸಹಾ ಐದನೇ ಸ್ಥಾನದಲ್ಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಗ್ಗಿಲ್ಲದ AI ಕಂಟೆಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಕ್ಯಾಲಿಫೋರ್ನಿಯಾದಲ್ಲಿ ಏಕಾಂಗಿ ಪಾದಯಾತ್ರೆ: ಪೆಟ್ರೋಲಿಯಂಗೆ ಪರ್ಯಾಯ ಶೋಧದಲ್ಲಿ ತೊಡಗಿದ್ದ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿ ನಿಗೂಢ ಸಾವು!

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್