ಫೈಲ್
ಫೈಲ್ 
ದೇಶ

ರಾಹುಲ್ ಗಾಂಧಿ ಜೊತೆ ಕಮಲ್ ನಾಥ್ ದೂರವಾಣಿಯಲ್ಲಿ ಮಾತನಾಡಿದ್ದಾರೆ: ಕಾಂಗ್ರೆಸ್ ನಾಯಕ

Srinivas Rao BV

ಭೋಪಾಲ್: ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ನಾಥ್ ಬಿಜೆಪಿಗೆ ಸೇರಲಿದ್ದಾರೆ ಎಂಬ ವದಂತಿಗಳ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ಅವರ ಆಪ್ತ ಸಜ್ಜನ್ ಸಿಂಗ್ ವರ್ಮಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವರ್ಮಾ, ದೆಹಲಿಯ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಕಮಲ್ ನಾಥ್ ಮಧ್ಯಪ್ರದೇಶದ 29 ಲೋಕಸಭಾ ಸ್ಥಾನಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೊಂದಿದ್ದರು.

"ಮಧ್ಯಪ್ರದೇಶದ 29 ಲೋಕಸಭಾ ಸ್ಥಾನಗಳಿಗೆ ಜಾತಿ ಸಮೀಕರಣವನ್ನು ಹೇಗೆ ಸ್ಥಾಪಿಸುವುದು ಎಂಬುದು ಇದೀಗ ತಮ್ಮ ಮುಖ್ಯ ಗಮನವಾಗಿದೆ ಎಂದು ಕಮಲ್ ನಾಥ್ ನನಗೆ ಹೇಳಿದ್ದರು. ಕಾಂಗ್ರೆಸ್ ತೊರೆಯುವ ಬಗ್ಗೆ ಯೋಚಿಸಿಲ್ಲ ಎಂದು ಅವರು ನನಗೆ ಹೇಳಿುದ್ದ" ಎಂದು ವರ್ಮಾ ಮಾಹಿತಿ ನೀಡಿದ್ದಾರೆ.

ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ (2018 ರಿಂದ ಮಾರ್ಚ್ 2020) ಸಚಿವರಾಗಿದ್ದ ವರ್ಮಾ, ಕಮಲ್ ನಾಥ್ ಅವರು ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಶೀಘ್ರದಲ್ಲೇ ಮಧ್ಯಪ್ರದೇಶವನ್ನು ಪ್ರವೇಶಿಸಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅವರು ಕಾಂಗ್ರೆಸ್ ತೊರೆಯುವ ಸುದ್ದಿಯನ್ನು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಕೇಳಿದ ಪ್ರಶ್ನೆಗೆ. "ಏನಾಗುತ್ತದೆಯೋ ಅದನ್ನು ಅವರಿಗೆ ತಿಳಿಸಲಾಗುವುದು ಎಂದು ನಾನು ಮಾಧ್ಯಮಗಳಿಗೆ ಹೇಳಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಎಲ್ಲ ವಿಷಯಗಳನ್ನು ಮಾಧ್ಯಮಗಳು ಸೃಷ್ಟಿಸಿವೆ. ಭಾರತ್ ಜೋಡೋ ನ್ಯಾಯ್ ಯಾತ್ರೆ ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ" ಎಂದು ವರ್ಮಾ ಹೇಳಿದರು.

SCROLL FOR NEXT