ನಾಗಾಲ್ಯಾಂಡ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ನಾಗಾಲ್ಯಾಂಡ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 
ದೇಶ

ಮಾನನಷ್ಟ ಮೊಕದ್ದಮೆ: ನಾಳೆ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರ್; ನ್ಯಾಯ ಯಾತ್ರೆಗೆ ಬ್ರೇಕ್

Lingaraj Badiger

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್‌ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ಜಾರಿ ಮಾಡಿರುವುದರಿಂದ ಮಂಗಳವಾರ ಬೆಳಗ್ಗೆ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಗೆ ವಿರಾಮ ನೀಡಲಾಗುವುದು ಎಂದು ಕಾಂಗ್ರೆಸ್‌ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಸೋಮವಾರ ತಿಳಿಸಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು 37ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ಬೆಳಗ್ಗೆ ಬ್ರೇಕ್ ತೆಗೆದುಕೊಳ್ಳಲಾಗುವುದು ಮತ್ತು ಮಧ್ಯಾಹ್ನ 2 ಗಂಟೆಗೆ ಅಮೇಥಿಯ ಫರ್ಸತ್‌ಗಂಜ್‌ನಿಂದ ಪುನರಾರಂಭವಾಗಲಿದೆ ಎಂದು ಜೈರಾಮ್ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

"ಆಗಸ್ಟ್ 4, 2018 ರಂದು ಬಿಜೆಪಿ ನಾಯಕರೊಬ್ಬರು ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 20 ರಂದು ಬೆಳಗ್ಗೆ ಸುಲ್ತಾನ್‌ಪುರದ ಜಿಲ್ಲಾ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಲಾಗಿದೆ. ಆದ್ದರಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅರ್ಧ ದಿನ ಬ್ರೇಕ್ ನೀಡಲಾಗಿದೆ" ಎಂದು ಕಾಂಗ್ರೆಸ್ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಫೆಬ್ರವರಿ 20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ/ಶಾಸಕರ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣಗೆ ಹಾಜರಾಗಲಿದ್ದಾರೆ.

SCROLL FOR NEXT