ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

ಬಿಜೆಪಿ ಮುಖ್ಯಸ್ಥ- ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭೇಟಿ: ಮೈತ್ರಿ ಮುನ್ಸೂಚನೆ?

ಮುಂಬೈ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಆಶೀಶ್ ಶೆಲಾರ್ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ-ಎಂಎನ್ಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಂಬೈ: ಮುಂಬೈ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಆಶೀಶ್ ಶೆಲಾರ್ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ-ಎಂಎನ್ಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶೆಲಾರ್, ಹಳೆಯ ಸ್ನೇಹಿತರ ನಡುವೆ ಭೇಟಿಯಾಗುತ್ತಿರುತ್ತದೆ, ಸೂಕ್ತ ಸಮಯದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

"ರಾಜ್ ಠಾಕ್ರೆ ಮತ್ತು ನಾನು ಬಹಳ ಹಿಂದಿನಿಂದಲೂ ಸ್ನೇಹಿತರಾಗಿದ್ದೇವೆ. ನಾವು ಇತರ ಕೆಲವು ವಿಷಯಗಳನ್ನು ಭೇಟಿಯಾಗಿ ಚರ್ಚಿಸುತ್ತೇವೆ. ನಾವು ಸರಿಯಾದ ಸಮಯದಲ್ಲಿ ಕೆಲವು ವಿವರಗಳನ್ನು ಬಹಿರಂಗಪಡಿಸುತ್ತೇವೆ" ಎಂದು ದಾದರ್‌ನಲ್ಲಿರುವ ಅವರ ನಿವಾಸದಲ್ಲಿ ಠಾಕ್ರೆ ಅವರನ್ನು ಭೇತಿ ಮಾಡಿದ ನಂತರ ಶೆಲಾರ್ ಸುದ್ದಿಗಾರರಿಗೆ ತಿಳಿಸಿದರು.

ನಗರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ಮರಾಠಿ ಮತಗಳನ್ನು ವಿಭಜಿಸಲು ಬಿಜೆಪಿ ಎಂಎನ್‌ಎಸ್‌ನೊಂದಿಗೆ ಕೈಜೋಡಿಸಬಹುದು ಎಂಬ ಊಹಾಪೋಹಗಳು ಮಹಾರಾಷ್ಟ್ರದ ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿವೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ನಾಯಕರ ನಿಯೋಗವು ಇತ್ತೀಚೆಗೆ ರಾಜ್ಯ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿತ್ತು. "ಎರಡೂ ಪಕ್ಷಗಳು (ಬಿಜೆಪಿ ಮತ್ತು ಎಂಎನ್‌ಎಸ್) ಸ್ನೇಹಪರವಾಗಿವೆ ಆದರೆ ಮೈತ್ರಿ ಕುರಿತು ಯಾವುದೇ ಚರ್ಚೆ ನಡೆದಿಲ್ಲ. (ರಾಜಕೀಯ) ಮುಂಬರುವ ದಿನಗಳಲ್ಲಿ ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎಲ್ಲವೂ ಸ್ಪಷ್ಟವಾಗುತ್ತದೆ" ಎಂದು ಫಡ್ನವೀಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!