ರೈತರ ಪ್ರತಿಭಟನೆ PTI
ದೇಶ

ಬೇಡಿಕೆಗಳನ್ನು ಈಡೇರಿಸಿ: ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ರೈತರ ಆಗ್ರಹ

ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನೀಡುವುದಕ್ಕೆ ಕಾನೂನು ಬದ್ಧ ಗ್ಯಾರೆಂಟಿ ಹಾಗೂ ರೈತರ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕೆಂದು ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಆಗ್ರಹಿಸಿದ್ದಾರೆ.

ನವದೆಹಲಿ: ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನೀಡುವುದಕ್ಕೆ ಕಾನೂನು ಬದ್ಧ ಗ್ಯಾರೆಂಟಿ ಹಾಗೂ ರೈತರ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕೆಂದು ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ರೈತ ಮುಖಂಡರು, ಫೆ.21 ರಂದು ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.

ಮಂಗಳವಾರ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿ ಪಾಯಿಂಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿಸಾನ್ ಮಜ್ದೂರ್ ಮೋರ್ಚಾ ಪ್ರತಿನಿಧಿಸುವ ಪಂಧೇರ್, ರೈತರಿಗೆ ಮೂರು ದೊಡ್ಡ ಬೇಡಿಕೆಗಳಿವೆ: ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಮೇಲೆ ಕಾನೂನು ಖಾತರಿಪಡಿಸುವುದು “ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಸಿ 2 ಪ್ಲಸ್ ಶೇ.50 ಅನುಷ್ಠಾನಗೊಳಿಸುವ ಸೂತ್ರ ಮತ್ತು ಸಾಲ ಮನ್ನಾ ಈ ಬೇಡಿಕೆಗಳಾಗಿವೆ ಎಂದು ತಿಳಿಸಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪಂಧೇರ್, ಕೇಂದ್ರ ಸಚಿವರೊಂದಿಗಿನ ಸಭೆಯಲ್ಲಿ ರೈತರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಮೂಲಕ ಎಂಎಸ್‌ಪಿ ಕುರಿತು ಕಾನೂನನ್ನು ಜಾರಿಗೆ ತರಲು ಪ್ರಸ್ತಾಪಿಸಿದರು.

ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರ ಮುಂದಿಟ್ಟಿದ್ದ ಪ್ರಸ್ತಾವನೆಯ ಬಗ್ಗೆ ಚರ್ಚೆ ನಡೆಸಿದ ಬಳಿಕ ರೈತರು ಕೆಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಹಾಗೂ ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋ ಪ್ರತಿಭಟನೆಯ ನೇತೃತ್ವ ವಹಿಸಿವೆ.

ಸಾಲ ಮನ್ನಾ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ವರದಿಗಳ ಪ್ರಕಾರ ರೈತರ ಒಟ್ಟು ಸಾಲ 18.5 ಲಕ್ಷ ಕೋಟಿ ರೂ ಇದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಬೇಕು ಎಂದು ಅವರು ವಿನಂತಿಸಿದರು, ನಂತರ ಅದಕ್ಕೆ ಕಾರ್ಯವಿಧಾನವನ್ನು ರೂಪಿಸಬಹುದು ಎಂದು ಪಂಧೇರ್ ಅಭಿಪ್ರಾಯಪಟ್ಟಿದ್ದಾರೆ.

"ಈಗಿನ ಪ್ರಧಾನಿ ಬಲಿಷ್ಠ ಪ್ರಧಾನಿ ಎಂದು ಬಿಜೆಪಿ ಹೇಳಿಕೊಂಡಿದೆ. ಅವರು 80 ಕೋಟಿ ರೈತರು ಮತ್ತು ರೈತ ಕಾರ್ಮಿಕರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದರೆ, ಅವರು ನಿಜವಾಗಿಯೂ ಬಲಿಷ್ಠ ಪ್ರಧಾನಿ ಎಂಬ ಬಿಜೆಪಿಯ ಹೇಳಿಕೆಯನ್ನು ಸಾಬೀತುಪಡಿಸುತ್ತದೆ" ಎಂದು ಪಂಧೇರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

SCROLL FOR NEXT