ಪ್ರತಿಭಟನಾ ನಿರತ ರೈತರು PTI
ದೇಶ

ರೈತರ ಪ್ರತಿಭಟನೆ: 177 ಸಾಮಾಜಿಕ ಜಾಲತಾಣ ಖಾತೆ, ವೆಬ್ ಲಿಂಕ್ ಗಳಿಗೆ ಕೇಂದ್ರ ಸರ್ಕಾರ ತಾತ್ಕಾಲಿಕ ನಿರ್ಬಂಧ

ರೈತರ ಪ್ರತಿಭಟನೆಗೆ ಸಂಬಂಧಿಸಿದ ಸುಮಾರು 177 ಸಾಮಾಜಿಕ ಜಾಲತಾಣದ ಖಾತೆಗಳು ಮತ್ತು ವೆಬ್ ಲಿಂಕ್ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಸರ್ಕಾರ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದ ಸುಮಾರು 177 ಸಾಮಾಜಿಕ ಜಾಲತಾಣದ ಖಾತೆಗಳು ಮತ್ತು ವೆಬ್ ಲಿಂಕ್ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಸರ್ಕಾರ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಗೃಹ ಸಚಿವಾಲಯದ ಕೋರಿಕೆಯ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಫೆಬ್ರವರಿ 14 ಮತ್ತು 19 ರಂದು ಈ ಆದೇಶಗಳನ್ನು ಹೊರಡಿಸಿದೆ.

ಗೃಹ ಸಚಿವಾಲಯದ ಕೋರಿಕೆಯ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ವೆಬ್ ಲಿಂಕ್ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಆದೇಶ ಹೊರಡಿಸಲಾಗಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್, ಸ್ನ್ಯಾಪ್ಚಾಟ್ ಮತ್ತು ಇತರ ಕೆಲವು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿನ ಲಿಂಕ್ಗಳು ಮತ್ತು ಖಾತೆಗಳನ್ನು ನಿರ್ಬಂಧಿಸಲಾಗುತ್ತದೆ. ರೈತರ ಪ್ರತಿಭಟನೆ ಮುಗಿದ ನಂತರ ಈ ಖಾತೆಗಳನ್ನು ಪುನಃಸ್ಥಾಪಿಸಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!