ಪ್ರಧಾನಿ ಮೋದಿ ಮತ್ತು ಮಮತಾ ಬ್ಯಾನರ್ಜಿ(ಸಂಗ್ರಹ ಚಿತ್ರ) 
ದೇಶ

ಪಶ್ಚಿಮ ಬಂಗಾಳದಲ್ಲಿ ಆಧಾರ್ ಕಾರ್ಡು ನಿಷ್ಕ್ರಿಯ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಕ್ರಮವು ಸಹಜ ನ್ಯಾಯದ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಕೂಡ ಮಮತಾ ಬ್ಯಾನರ್ಜಿ ಪತ್ರದಲ್ಲಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ವಿಶೇಷವಾಗಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನರ ಆಧಾರ್ ಕಾರ್ಡ್‌ಗಳನ್ನು ನಿರ್ದಾಕ್ಷಿಣ್ಯವಾಗಿ ನಿಷ್ಕ್ರಿಯಗೊಳಿಸುವ ಗಂಭೀರ ಸ್ವರೂಪದ ಹಠಾತ್ ಬೆಳವಣಿಗೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದು ಮಮತಾ ಪತ್ರದಲ್ಲಿ ಬರೆದಿದ್ದಾರೆ. ಈ ಸಮುದಾಯದ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನ ಮಂತ್ರಿ ಮೋದಿಯವರಿಗೆ ಬರೆದ ಪತ್ರ

ದೆಹಲಿಯಲ್ಲಿರುವ UIDAl ನ ಪ್ರಧಾನ ಕಛೇರಿಯು ಯಾವುದೇ ಕ್ಷೇತ್ರ ವಿಚಾರಣೆ ಅಥವಾ ವ್ಯಕ್ತಿಗಳ ಅಭಿಪ್ರಾಯ, ಅನಿಸಿಕೆ ಕೇಳದೆ, ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನೇರವಾಗಿ ವ್ಯಕ್ತಿಗಳು ಮತ್ತು ಕುಟುಂಬ ಸದಸ್ಯರಿಗೆ ಅವರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವುದರ ಕುರಿತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ.

ರಾಜ್ಯದ ಪ್ರತಿಯೊಬ್ಬ ನಾಗರಿಕರು ಈ ವಿಷಯದ ಬಗ್ಗೆ ಭಯದ ಸ್ಥಿತಿಯಲ್ಲಿದ್ದಾರೆ. ಕಾರಣಗಳನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಹಠಾತ್ ಕ್ರಮಕ್ಕೆ ಕಾರಣಗಳ ಬಗ್ಗೆ ನಾನು ನಿಮ್ಮಿಂದ ತಿಳಿಯಲು ಬಯಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT