ಕಾಂಗ್ರೆಸ್ ಮುಖಂಡ ಕಮಲ್ ನಾಥ್
ಕಾಂಗ್ರೆಸ್ ಮುಖಂಡ ಕಮಲ್ ನಾಥ್ 
ದೇಶ

ಕಮಲ್ ನಾಥ್ ನಡೆ ನಿಗೂಢ; ಛಿಂದ್ವಾರದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ

Srinivas Rao BV

ಭೋಪಾಲ್: ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಅವರ ಮುಂದಿನ ರಾಜಕೀಯ ನಡೆ ಇನ್ನೂ ನಿಗೂಢವಾಗಿದ್ದು, ಈ ನಡುವೆ ರಾಜ್ಯದ ಛಿಂದ್ವಾರದಲ್ಲಿ ಕಾಂಗ್ರೆಸ್ ನ ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಛಿಂದ್ವಾರ ಜಿಲ್ಲೆ ಕಮಲ್ ನಾಥ್ ಅವರ ಪ್ರಭಾವ ಹೆಚ್ಚಾಗಿರುವ ಪ್ರದೇಶವಾಗಿದೆ. ಕಾಂಗ್ರೆಸ್ ನಿಂದ ಪಕ್ಷಕ್ಕೆ ಸೇರ್ಪಡೆಯಾದವರನ್ನು ಸ್ವಾಗತಿಸಿದ ಸಿಎಂ ಮೋಹನ್ ಯಾದವ್, ಮುಂದಿನ ದಿನಗಳಲ್ಲಿ ಇನ್ನೂ ಹಲವು ಮಂದಿ ಕಾಂಗ್ರೆಸ್ ನಿಂದ ಬಿಜೆಪಿಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಪಕ್ಷಕ್ಕೆ ಸೇರ್ಪಡೆಯಾದವರನ್ನು ಸ್ವಾಗತಿಸಿದ ಸಿಎಂ ಮೋಹನ್ ಯಾದವ್, ಮುಂದಿನ ದಿನಗಳಲ್ಲಿ ಇನ್ನೂ ಹಲವು ಮಂದಿ ಕಾಂಗ್ರೆಸ್ ನಿಂದ ಬಿಜೆಪಿಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಉಜ್ವಲ್ ಸಿಂಗ್ ಚೌಹಾಣ್, ಕೌನ್ಸಿಲರ್ ಗಳು, ಸರ್ಪಂಚ್ ಗಳು, ಜನಪದ ಸದಸ್ಯರು ಹಾಗೂ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು.

ಈ ಬೆಳವಣಿಗೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಪರಿಣಾಮ ಉಂಟಾಗುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರರು ಪ್ರತಿಕ್ರಿಯೆ ನೀಡಿದ್ದಾರೆ. ಛಿಂದ್ವಾರ ಕ್ಷೇತ್ರವನ್ನು ಕಮಲ್ ನಾಥ್ ಈ ಹಿಂದೆ 9 ಬಾರಿ ಪ್ರತಿನಿಧಿಸಿದ್ದರು. ಈಗ ಅವರ ಪುತ್ರ ನಕುಲ್ ನಾಥ್ ಆಯ್ಕೆಯಾಗಿದ್ದಾರೆ.

2019 ರ ಚುನಾವಣೆಯಲ್ಲಿ ಬಿಜೆಪಿ 29 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಮಧ್ಯಪ್ರದೇಶವನ್ನು ಗೆದ್ದುಕೊಂಡಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್‌ನಿಂದ ಕಸಿದುಕೊಳ್ಳಲು ವಿಫಲವಾದ ಏಕೈಕ ಕ್ಷೇತ್ರ ಇದಾಗಿದೆ. ಹೊಸದಾಗಿ ರಚಿಸಲಾದ ಪಾಂಡುರ್ನಾ ಜಿಲ್ಲೆಯಿಂದ 700 ಕ್ಕೂ ಹೆಚ್ಚು ಕಾಂಗ್ರೆಸ್ಸಿಗರು ಸೇರಿದಂತೆ ಒಟ್ಟು 1,500 ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಚಿಂದ್ವಾರ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

SCROLL FOR NEXT