ಅಜಯ್ ಮಾಕೆನ್
ಅಜಯ್ ಮಾಕೆನ್ 
ದೇಶ

ನಮ್ಮ ಬ್ಯಾಂಕ್ ಖಾತೆಗಳಿಂದ ಐಟಿ ಇಲಾಖೆ 65 ಕೋಟಿ ರೂ. ವಿತ್ ಡ್ರಾ ಮಾಡಿದೆ: ಕಾಂಗ್ರೆಸ್ ಆರೋಪ

Lingaraj Badiger

ನವದೆಹಲಿ: ಆದಾಯ ತೆರಿಗೆ ಇಲಾಖೆಯು ಹಿಂದಿನ ವರ್ಷಗಳ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗಲೇ ಪಕ್ಷದ ವಿವಿಧ ಬ್ಯಾಂಕ್‌ ಖಾತೆಗಳಿಂದ 65 ಕೋಟಿ ರೂಪಾಯಿಗಳನ್ನು "ಹಿಂತೆಗೆದುಕೊಂಡಿರುವುದು" ಪ್ರಜಾಸತ್ತಾತ್ಮಕ ನಡೆ ಅಲ್ಲ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.

ಕಾಂಗ್ರೆಸ್ ನ ಆದಾಯ ತೆರಿಗೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂದು ಆದಾಯ ತೆರಿಗೆ ಇಲಾಖೆ 210 ಕೋಟಿ ರೂ. ವಸೂಲಿ ಮಾಡಲು ಮುಂದಾಗಿದೆ. ಆದರೆ ಕುರಿತ ಮೇಲ್ಮನವಿ ಪ್ರಾಧಿಕಾರದಲ್ಲಿ ಪ್ರಕರಣದ ವಿಚಾರಣೆ ಬಾಕಿ ಇರುವಾಗಲೇ ಕಾಂಗ್ರೆಸ್‌ ಮತ್ತು ಯುವ ಕಾಂಗ್ರೆಸ್ ಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ರೂಪಾಯಿ ಹಿಂಪಡೆಯಲು ಆದಾಯ ತೆರಿಗೆ ಇಲಾಖೆ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ ಎಂದು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೆನ್ ಅವರು ಹೇಳಿದ್ದಾರೆ.

"ತನಿಖಾ ಸಂಸ್ಥೆಗಳು ವಿಚಾರಣೆಯನ್ನು ಅನಿಯಂತ್ರಿತವಾಗಿ ನಡೆಸುವುದನ್ನು ರೂಢಿ ಮಾಡಿಕೊಂಡರೆ ಪ್ರಜಾಪ್ರಭುತ್ವವೇ ನಾಶವಾಗುತ್ತದೆ" ಎಂದು ಕಿಡಿ ಕಾರಿದ ಮಾಕೆನ್, ಕಾಂಗ್ರೆಸ್ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಹೊಂದಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಬ್ಯಾಂಕ್ ಖಾತೆಗಳಿಂದ ಹಣ ವಿತ್ ಡ್ರಾ ಮಾಡುವುದು "ಪ್ರಜಾಸತ್ತಾತ್ಮಕ ನಡೆ ಅಲ್ಲ" ಎಂದು ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

SCROLL FOR NEXT