ಸೂರತ್ ಮಾಡಲ್ ತಾನಿಯಾ ಸಿಂಗ್  PTI
ದೇಶ

ಸೂರತ್ ಮಾಡಲ್ ಆತ್ಮಹತ್ಯೆ ಪ್ರಕರಣ: ಐಪಿಎಲ್ ಆಟಗಾರನ ಮೇಲೆ ತನಿಖೆಯ ತೂಗುಗತ್ತಿ!

ಸೂರತ್ ರೂಪದರ್ಶಿ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಐಪಿಎಲ್ ಆಟಗಾರ ಅಭಿಷೇಕ್ ಶರ್ಮಾ ಅವರಿಗೆ ನೊಟೀಸ್ ಕಳಿಸಲಿದ್ದಾರೆ.

ಸೂರತ್: ಸೂರತ್ ರೂಪದರ್ಶಿ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಐಪಿಎಲ್ ಆಟಗಾರ ಅಭಿಷೇಕ್ ಶರ್ಮಾ ಅವರಿಗೆ ನೊಟೀಸ್ ಕಳಿಸಲಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ತಾನಿಯಾ ಸಿಂಗ್ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಸ್ನೇಹಿತರಾಗಿದ್ದರು ಹಾಗೂ ಅಭಿಷೇಕ್ ಶರ್ಮಾ ಜೊತೆ ತಾನಿಯಾ ವಾಟ್ಸ್ ಆಪ್ ಸಂದೇಶ ಕಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಹೀಗಾಗಿ ಅಭಿಷೇಕ್ ಶರ್ಮಾಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಕಳಿಸಲಾಗುತ್ತದೆ ಎಂದು ಸೂರತ್ ಪೊಲೀಸರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಾನಿಯಾ ಸಿಂಗ್ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಸ್ನೇಹಿತರಾಗಿದ್ದರು ಹಾಗೂ ಅಭಿಷೇಕ್ ಶರ್ಮಾ ಜೊತೆ ತಾನಿಯಾ ವಾಟ್ಸ್ ಆಪ್ ಸಂದೇಶ ಕಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಹೀಗಾಗಿ ಅಭಿಷೇಕ್ ಶರ್ಮಾಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಕಳಿಸಲಾಗುತ್ತದೆ ಎಂದು ಸೂರತ್ ಪೊಲೀಸರು ಹೇಳಿದ್ದಾರೆ.

ಸೂರತ್ ನ ಅಪಾರ್ಟ್ ಮೆಂಟ್ ನಲ್ಲಿ ತಾನಿಯಾ ಸಿಂಗ್ ಸೀಲಿಂಗ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ಪತ್ತೆಯಾದ ಪ್ರದೇಶದಲ್ಲಿ ಯಾವುದೇ ಪತ್ರ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅಭಿಷೇಕ್ ಶರ್ಮಾ ಮೃತ ಮಾಡೆಲ್ ಜೊತೆ ಸ್ನೇಹದಲ್ಲಿದ್ದರು ಎಂಬುದು ನಮಗೆ ಇದುವರೆಗೆ ತಿಳಿದು ಬಂದಿದೆ. ಹೆಚ್ಚಿನ ವಿವರಗಳು ತನಿಖೆಯಲ್ಲಿ ಗೊತ್ತಾಗಲಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿಆರ್ ಮಲ್ಹೋತ್ರಾ ಹೇಳಿದ್ದಾರೆ. ಮಾಡೆಲ್ ಶರ್ಮಾ ಅವರಿಗೆ ವಾಟ್ಸಾಪ್ ಚಾಟ್‌ನಲ್ಲಿ ಸಂದೇಶ ಕಳುಹಿಸಿದ್ದರು ಆದರೆ ಅದಕ್ಕೆ ಆತ ಪ್ರತಿಕ್ರಿಯಿಸಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

"ನಾವು ಇನ್ನೂ ಅಭಿಷೇಕ್ ಶರ್ಮಾ ಅವರನ್ನು ಸಂಪರ್ಕಿಸಿಲ್ಲ ಆದರೆ ನಾವು ಅವರಿಗೆ ನೋಟಿಸ್ ಕಳುಹಿಸುತ್ತೇವೆ" ಎಂದು ಎಸಿಪಿ ಹೇಳಿದ್ದಾರೆ. "ಪರಿಶೀಲನೆಯ ನಂತರ, ಪರಿಶೀಲನೆಯ ಸಮಯದಲ್ಲಿ ಹೆಸರುಗಳು ಉಲ್ಲೇಖವಾಗಿರುವ ವ್ಯಕ್ತಿಗಳನ್ನು ಅವರ ಹೇಳಿಕೆಗಳನ್ನು ದಾಖಲಿಸಲು ಅಗತ್ಯವಿದ್ದರೆ ನಾವು ಕರೆ ಮಾಡಬಹುದು" ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!