Representational 
ದೇಶ

63 ಸ್ಥಾನಗಳಲ್ಲಿ ಎಸ್ ಪಿ, 17 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ; ಉತ್ತರ ಪ್ರದೇಶದಲ್ಲಿ ಲೋಕಸಮರಕ್ಕೆ ನಾಂದಿ

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ.

ಲಖನೌ: ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ 2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ.

ಮೈತ್ರಿಯ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ ಎಂದು ಹೇಳಿದರು.

"ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿವೆ. ಇದು ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುತ್ತದೆ ಮತ್ತು 2024 ರಲ್ಲಿ ಇಂಡಿಯಾ ಮೈತ್ರಿಕೂಟ ಕೇಂದ್ರದಲ್ಲಿ ಸರ್ಕಾರ ರಚಿಸುತ್ತದೆ. ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ. ನಾವು ಬಿಜೆಪಿಯೇತರ ಮತಗಳ ಚದುರುವಿಕೆಯನ್ನು ತಡೆಯಲು ಯತ್ನಿಸಿದ್ದೇವೆ" ಮೆಹ್ರೋತ್ರಾ ಅವರು ಎಎನ್‌ಐಗೆ ತಿಳಿಸಿದ್ದಾರೆ.

"ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿವೆ. ನಾವು ಉತ್ತರ ಪ್ರದೇಶದಲ್ಲಿ ಎಲ್ಲಾ 80 ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸುತ್ತೇವೆ" ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗಳನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಈ ಮೂಲಕ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಆರೋಪಿಸಿದ್ದಾರೆ.

ಈ ಮಧ್ಯೆ, ಅಖಿಲೇಶ್ ಯಾದವ್ ಸಹ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದು, ಶೀಘ್ರದಲ್ಲೇ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ. ಎರಡು ಪಕ್ಷಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸಲಾಗುವುದು ಎಂದು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT