ಸಾಂದರ್ಭಿಕ ಚಿತ್ರ 
ದೇಶ

ವಿಂಗ್ ಕಮಾಂಡರ್ ಎಂದು ಹೇಳಿಕೊಂಡು ಏರ್ ಫೋರ್ಸ್ ಸ್ಟೇಷನ್ ಪ್ರವೇಶಿಸಿದ್ದ ವ್ಯಕ್ತಿ ಬಂಧನ

ಐಎಎಫ್‌ ವಿಂಗ್ ಕಮಾಂಡರ್ ಎಂದು ಹೇಳಿಕೊಂಡು ದೆಹಲಿ ಕಂಟೋನ್ಮೆಂಟ್ ಪ್ರದೇಶದ ಪಾಲಂ ಏರ್ ಫೋರ್ಸ್ ಸ್ಟೇಷನ್‌ ಪ್ರವೇಶಿಸಿದ ಆರೋಪದ ಮೇಲೆ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ನವದೆಹಲಿ: ಐಎಎಫ್‌ ವಿಂಗ್ ಕಮಾಂಡರ್ ಎಂದು ಹೇಳಿಕೊಂಡು ದೆಹಲಿ ಕಂಟೋನ್ಮೆಂಟ್ ಪ್ರದೇಶದ ಪಾಲಂ ಏರ್ ಫೋರ್ಸ್ ಸ್ಟೇಷನ್‌ ಪ್ರವೇಶಿಸಿದ ಆರೋಪದ ಮೇಲೆ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಯನ್ನು ವಿನಾಯಕ್ ಚಡ್ಡಾ ಎಂದು ಗುರುತಿಸಲಾಗಿದ್ದು, ತನ್ನ ತಂದೆಗೆ ವಾಯುಪಡೆ ಸ್ಟೇಷನ್ ನ ದಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಬಯಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಬುಧವಾರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ(ನೈಋತ್ಯ) ರೋಹಿತ್ ಮೀನಾ ಅವರು ಹೇಳಿದ್ದಾರೆ.

ಆರೋಪಿಯು ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ವಾಯುಪಡೆ ಸಿಬ್ಬಂದಿ ಬಂಧಿಸಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ತಿಮ್ಮಯ್ಯ ರಸ್ತೆಯಲ್ಲಿರುವ ವಾಯುಪಡೆಯ ದಂತ ಆಸ್ಪತ್ರೆಗೆ, ತಾನು ವಿಂಗ್‌ ಕಮಾಂಡರ್‌ ಎಂದು ಹೇಳಿಕೊಂಡು ಈ ವ್ಯಕ್ತಿ ಪ್ರವೇಶಿಸಿದ್ದರು ಎಂದು ಅವರು ಹೇಳಿದ್ದಾರೆ.

ನಕಲಿ ಐಡಿ ಕಾರ್ಡ್ ಬಳಸಿಕೊಂಡು ಭದ್ರತೆಯ ಮೊದಲ ಹಂತವನ್ನು ಪ್ರವೇಶಿಸಿದ್ದಾರೆ. ಆದರೆ ನಂತರ ವಾಯುಪಡೆಯ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಮೀನಾ ತಿಳಿಸಿದ್ದಾರೆ.

ನಂತರ ಚಡ್ಡಾ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಅವರ ಬಳಿ ಹಲವು ರಕ್ಷಣಾ ಸಿಬ್ಬಂದಿಗಳ ಹೆಸರಿನ ನಕಲಿ ಗುರುತಿನ ಚೀಟಿ ಮತ್ತು ಇತರ ಕೆಲವು ಮದ್ಯದ ಕಾರ್ಡ್‌ಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಸಬ್ಸಿಡಿ ದರದಲ್ಲಿ ಮದ್ಯ ಖರೀದಿಸಲು ರಕ್ಷಣಾ ಸಿಬ್ಬಂದಿಗೆ ಮದ್ಯ ಕಾರ್ಡ್‌ಗಳನ್ನು ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಹತ್ಯೆ; ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರ ಕೊಲೆ

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

SCROLL FOR NEXT