ಘಟನಾ ಸ್ಥಳದಲ್ಲಿ ಪೊಲೀಸರು. 
ದೇಶ

ಗುಜರಾತ್'ನಲ್ಲಿ ಭೀಕರ ಅಪಘಾತ: ಬಸ್'ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ, ಇಬ್ಬರ ದುರ್ಮರಣ

ನಾಡಿಯಾಡ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯೆಲ್ಲಿ ಇಬ್ಬರು ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ನಾಡಿಯಾಡ್ (ಗುಜರಾತ್): ನಾಡಿಯಾಡ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯೆಲ್ಲಿ ಇಬ್ಬರು ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಸಿಮೆಂಟ್ ಟ್ಯಾಂಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಅಹಮದಾಬಾದ್‌ನಿಂದ ಪುಣೆಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 23 ಪ್ರಯಾಣಿಕರಿದ್ದರು. ಸಿಮೆಂಟ್ ಟ್ಯಾಂಕರ್‌ನ ಚಾಲಕ ವಾಹನವನ್ನು ಏಕಾಏಕಿ ಎಡಕ್ಕೆ ತಿರುಗಿಸಿದ್ದು, ಈ ವೇಳೆ ವಾಹನ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ರಸ್ತೆ ಬದಿಯ ಬೇಲಿಯನ್ನು ಮುರಿದು 25 ಅಡಿ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಾಧಿಯಾ ತಿಳಿಸಿದ್ದಾರೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನಿಂದ 550ಕ್ಕೂ ಹೆಚ್ಚು ಭಾರತೀಯರ ಸ್ಥಳಾಂತರ; ಗಲ್ಫ್‌ನಿಂದ 20,000 ಜನ ಭಾರತಕ್ಕೆ ವಾಪಸ್

ಎಪ್ಸ್ಟೀನ್ ಲಿಂಕ್ ಆರೋಪ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಕೇಂದ್ರ ಸಚಿವ ಹರ್ದೀಪ್ ಪುರಿ ಪುತ್ರಿ!

ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ!

ಎಲ್‌ಪಿಜಿ ಕೊರತೆ: 'ಜನ ಆತಂಕಗೊಳ್ಳುವ ಅವಶ್ಯಕತೆ ಇಲ್ಲ.. ಹೊಟೆಲ್ ನವರು ಪರ್ಯಾಯ ವ್ಯವಸ್ಥೆ ಮಾಡ್ಕೊಳ್ಳಿ'; K H Muniyappa

Video: 390 ಕೆಜಿ ತಂಬಾಕು ಅಕ್ರಮ ರವಾನೆ, ಪ್ರಶ್ನಿಸಿದ ಪೊಲೀಸ್ ಅನ್ನೇ ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಭೂಪ!

SCROLL FOR NEXT