ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಲಷ್ಕರ್-ಎ-ತಯ್ಯಿಬಾ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಲಾಗಿದ್ದು, ನಾಲ್ವರು ಉಗ್ರಗಾಮಿ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರ ಜಿಲ್ಲೆಯಲ್ಲಿ ನಾಲ್ವರು ಉಗ್ರಗಾಮಿ ಸಹಚರರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ)ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಂಧಿತರನ್ನು ವಾನ್ಪೋರಾದ ನಿವಾಸಿಗಳಾದ ಜಹೂರ್ ಅಹ್ಮದ್ ಪಂಡಿತ್, ಬಸೀರ್ ಹುಸೇನ್ ಪಂಡಿತ್, ಇಮ್ತಿಯಾಜ್ ಗುಲ್ ಮತ್ತು ಗುಲ್ಜಾರ್ ಅಹ್ಮದ್ ಖಾರ್ ಎಂದು ಗುರುತಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮ್ಯಾಗಜೀನ್‌ಗಳು, 20 ಪಿಸ್ತೂಲ್ ರೌಂಡ್‌ಗಳು, ನಾಲ್ಕು ಯುಬಿಜಿಗಳು ಮತ್ತು 24 ಐಎನ್‌ಎಸ್‌ಎಎಸ್ ರೌಂಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.